ಬ್ಯಾಡ್ಗಿ

ಮಣಿಪಾಲ್ ಆರೋಗ್ಯ ಕಾರ್ಡ್ 2023-24 ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಮಣಿಪಾಲ್ ಆರೋಗ್ಯ ಕಾರ್ಡ್ 2023-24 ರ ನೋಂದಣಿ ಪ್ರಕ್ರಿಯೆಗೆ ಚಾಲನೆ

ಬ್ಯಾಡಗಿ: ಮಣಿಪಾಲ್ ಆರೋಗ್ಯ ಕಾರ್ಡ್ 2023-24 ರ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಇದರ ಸದುಪಯೋಗವನ್ನು ಬ್ಯಾಡಗಿ ಸುತ್ತಮುತ್ತಲ ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಮಣಿಪಾಲದ ಕಸ್ತೂರಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದರು.

 ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆಸ್ಪತ್ರೆಯ ಸಂಸ್ಥಾಪಕ ಡಾ.ಟಿ.ಎಂ.ಎ. ಪೈ ಎಲ್ಲರಿಗೂ ಸುಲಭ ದರದಲ್ಲಿ ಆರೋಗ್ಯ ಲಭಿಸಬೇಕು ಎಂಬ ಹಿನ್ನೆಲೆಯಲ್ಲಿ  ಜನಪ್ರಿಯವಾಗಿರುವ ಮಣಿಪಾಲ್ ಆರೋಗ್ಯ ಕಾರ್ಡಿನ ನೋಂದಣಿಯನ್ನು ಈಗ ಆರಂಭಿಸುತ್ತಿದ್ದೇವೆ.ಸಾರ್ವಜನಿಕರು ಆಸ್ಪತ್ರೆಯ ಅಧಿಕೃತ ಪ್ರತಿನಿಧಿಗಳ ಬಳಿ ಅಥವಾ ಆನ್‌ಲೈನ್ ಮೂಲಕವೂ ನೋಂದಣಿಮಾಡಿಕೊಳ್ಳಬಹುದಾಗಿದೆ.

ಆರೋಗ್ಯ ಕಾರ್ಡ್ ಆಸ್ಪತ್ರೆಯ ಎಲ್ಲಾ ಆರೋಗ್ಯ ಸೇವೆಗಳ ಮೇಲೆ ರಿಯಾಯಿತಿ ನೀಡುತ್ತದೆ. ಸಣ್ಣ ಮೊತ್ತವನ್ನು ಪಾವತಿಸುವ ಮೂಲಕ, ಯಾರಾದರೂ ಸದಸ್ಯರಾಗಬಹುದು ಮತ್ತು ಪ್ರಯೋಜನಗಳನ್ನು ಪಡೆಯಬಹುದು. ಕಾರ್ಡ್ ಖರೀದಿಸಲು ಹೂಡಿಕೆ ಮಾಡಿದ ಹಣವನ್ನು ಕೇವಲ ಎರಡು ಅಥವಾ ಮೂರು ಕಾರ್ಡ್ ಬಳಕೆಗಳಲ್ಲಿ ರಿಯಾಯಿತಿಯ ರೂಪದಲ್ಲಿ ಹಿಂಪಡೆಯಬಹುದು. “ಸಂಪೂರ್ಣ ಕುಟುಂಬಕ್ಕಾಗಿ ಶ್ರೇಷ್ಠ ಮೌಲ್ಯ ಮತ್ತು ವಿಶ್ವಾಸಾರ್ಹ ಸೇವೆ” ಎಂಬುದು ಮಣಿಪಾಲ್ ಆರೋಗ್ಯಕಾರ್ಡ್ ನ ದ್ಯೇಯ ವಾಕ್ಯ ಎಂದರು.ಮಣಿಪಾಲ್ ಆರೋಗ್ಯ ಕಾರ್ಡ್ 2024 ರ ಯೋಜನೆಯು ಒಂದು ವರ್ಷದ ಯೋಜನೆಯಲ್ಲಿ ಕಾರ್ಡಿನ ಸದಸ್ಯತ್ವವು ಒಬ್ಬರಿಗೆ ರೂ. 300 ಕೌಟಂಬಿಕ ಕಾರ್ಡ್ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳಿಗೆ ರೂ. 600  ಮತ್ತು ಕುಟುಂಬ ಪ್ಲಸ್ ಯೋಜನೆಗೆ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದ ಒಳಗಿನ ಮಕ್ಕಳು ಮತ್ತು 4 ಪೋಷಕರು (ತಂದೆ, ತಾಯಿ, ಅತ್ತೆ ಮತ್ತು ಮಾವ)ರೂ. 750 ಇದೊಂದು ಹೆಚ್ಚುವರಿ ಲಾಭವಾಗಿದೆ. 2 ವರ್ಷದ ಯೋಜನೆಯಲ್ಲಿ ಒಬ್ಬರಿಗೆ ರೂ.500 ಕುಟುಂಬಕ್ಕೆ ರೂ. 800  ಮತ್ತು ಕೌಟಂಬಿಕ ಪ್ಲಸ್ ಯೋಜನೆಗೆ ರೂ. 950 ಆಗಿರುತ್ತದೆ ಎಂದರು.ಆಸ್ಪತ್ರೆಯ ಸಹ ವ್ಯವಸ್ಥಾಪಕ ಬಿ.ಎಸ್. ಕೃಷ್ಣಪ್ರ ಸಾದ್ ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್ ಹೊಂದಿರುವವರು, ಹೊರ ರೋಗಿ ವಿಭಾಗದಲ್ಲಿ, ಒಳ ರೋಗಿ ವಿಭಾಗದಲ್ಲಿ ತಜ್ಞ ಅಥವಾ ಸೂಪರ್ ಸ್ಪೆಷಲಿಸ್ಟ್ ವೈದ್ಯರ ಸಮಾಲೋಚನೆಯಲ್ಲಿ ಶೇಕಡಾ 50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇಕಡಾ 30 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾಸೌಂಡ್ ಗಳಲ್ಲಿ ಶೇಕಡಾ 20 ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇಕಡಾ 20 ರಿಯಾಯಿತಿ, ಔಷಧಾಲಯಗಳಲ್ಲಿ ಶೇಕಡಾ 12 ರವರೆಗೆ ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇಕಡಾ 25 ರಿಯಾಯಿತಿ ಪಡೆಯಬಹುದೆಂದರು. ಮಣಿಪಾಲ ಆರೋಗ್ಯ ಕಾರ್ಡ್ ನ್ನು ಒಂದು ಅಥವಾ ಎರಡು ವರ್ಷದ ಅವಧಿಗೆ ಎಷ್ಟು ಬಾರಿಯಾದರೂ ಉಪಯೋಗಿಸಬಹುದು. ಕಾರ್ಡ್ ನೋಂದಾಯಿಸಿದ ಮೊಬೈಲ್ ಸಂಖ್ಯೆಯಿಂದ 8867579797 ಗೆ ಮಿಸ್ ಕಾಲ್ ಕೊಡುವುದರ ಮೂಲಕ ನೋಂದಣಿ ಮಾಡಿದ ಆರೋಗ್ಯ ಕಾರ್ಡ್ ನ ಮಾಹಿತಿ ಪಡೆಯಬಹುದು. ಮಣಿಪಾಲ್ ಆರೋಗ್ಯ ಕಾರ್ಡ್ ಪಡೆಯಲು ತಾಲೂಕಿನಲ್ಲಿ ಬಿ.ಪಿ.ಚನ್ನಗೌಡ್ರನ್ನು ಸಂಪರ್ಕಿಸುವಂತೆ ತಿಳಿಸಿದರು.ಈ ಸಂದರ್ಭದಲ್ಲಿ ತಾಲೂಕಾ ಪತ್ರಕರ್ತರ ಸಂಘದ ಅಧ್ಯಕ್ಷ ಬಸವಂತಪ್ಪ ಹುಲ್ಲತ್ತಿ, ಮಣಿಪಾಲ್ ಆಸ್ಪತ್ರೆಯ ಎಂ.ಎಸ್.ಕಾರಂತ,ಅನಿಲ್ ನಾಯಕ್ ರಾಜಣ್ಣ ಹೊಸಳ್ಳಿ ಸೇರಿದಂತೆ ಇನ್ನಿತರರಿದ್ದರು.

ಸುದ್ದಿ ಓದಿ