ಕೃಷ್ಣಾ ನದಿಗೆ ಮಹಾರಾಷ್ಟ್ರದ ನೀರು ಬಿಡುಗಡೆ
ರಬಕವಿ-ಬನಹಟ್ಟಿ : ಸಮೀಪದ ಕೃಷ್ಣಾ ನದಿಯಲ್ಲಿ ಮತ್ತು ತಾಲ್ಲೂಕಿನ ಹಿಪ್ಪರಗಿ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿತ್ತು. ಹಿಪ್ಪರಗಿ ಜಲಾಶಯದಿಂದ 0.6 ಟಿಎಂಸಿ ನೀರನ್ನು ಕೂಡಾ ನದಿಯ ಮುಂಭಾಗಕ್ಕೆ ಬಿಡುಗಡೆ ಮಾಡಲಾಗಿತ್ತು. ಇದರಿಂದಾಗಿ ಈ ಭಾಗದಲ್ಲಿ ನೀರಿನ ಕೊರತೆ ಎದುರಾಗುತ್ತಿತ್ತು.
ಈಗ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ಕೃಷ್ಣಾ ನದಿಗೆ 2 ಟಿಎಂಸಿ ಯಷ್ಟು ನೀರಿನನ್ನು ಬಿಟ್ಟಿದ್ದರಿಂದ ಹಿಪ್ಪರಗಿ ಜಲಾಶಯದಲ್ಲಿ ನೀರನ್ನು ಸಂಗ್ರಹಿಸಲಾಗುತ್ತಿದೆ. ಇದರಿಂದಾಗಿ ಈ ಬಾರಿಯ ಬೇಸಿಗೆಯಲ್ಲಿ ಯಾವುದೆ ರೀತಿಯ ಸಮಸ್ಯೆ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ವಿವಿಧ ನಗರ ಮತ್ತು ಗ್ರಾಮೀಣ ಭಾಗದ ಜನರಿಗೆ ಯಾವುದೆ ತೊಂದರೆಯಾಗುವುದಿಲ್ಲ. ಆದರೂ ಜನರು ನೀರನ್ನು ಮಿತವಾಗಿ ಬಳಸಬೇಕು ಎಂದು ಜಲಾಶಯದ ಸಹಾಯಕ ಎಂಜಿನಿಯರ್ ವಿಠ್ಠಲ ನಾಯಕ ತಿಳಿಸಿದರು