ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಭಿತ್ತಿಪತ್ರ ಬಿಡುಗಡೆ
ಹಾವೇರಿ:ನ.18 : ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದ್ದು, ಸಮೂಹ ಸಾರಿಗೆ ಬಳಕೆ, ವಾಹನಗಳನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳುವುದರಿಂದ ವಾಯುಮಾಲಿನ್ಯ ತಡೆಯಬಹುದಾಗಿದೆ ಎಂದು ಧಾರವಾಡ ಅಪರ ಸಾರಿಗೆ ಆಯುಕ್ತರಾದ ಕೆ.ಟಿ.ಹಾಲಸ್ವಾಮಿ ಅವರು ಹೇಳಿದರು.
ಹಾವೇರಿ ಸಾರಿಗೆ ಪ್ರಾದೇಶಿಕ ಕಚೇರಿಯಲ್ಲಿ ಸೋಮವಾರ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಕುರಿತಾದ ಭಿತ್ತಿಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿ, ಮೋಟಾರು ವಾಹನ ನೀರೀಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.