ಬಾಲ್ಯ ವಿವಾಹ ತಡೆಗೆ ಜಾಗೃತಿ ಫಲಕಗಳ ಬಿಡುಗಡೆ: ಜಿಲ್ಲಾಧಿಕಾರಿ ಕೆ.ನಾಗೇಂದ್ರ ಪ್ರಸಾದ್ ಚಾಲನೆ
Release of awareness posters to prevent child marriage: District Collector K. Nagendra Prasad inaugu
ಲೋಕದರ್ಶನ ವರದಿ
ಬಳ್ಳಾರಿ 18: ಜಿಲ್ಲೆಯನ್ನು ಬಾಲ್ಯ ವಿವಾಹ ಮುಕ್ತ ಜಿಲ್ಲೆಯನ್ನಾಗಿ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಹಾಗೂ ರೀಚ್ ಸಂಸ್ಥೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿರುವ ‘ಮಕ್ಕಳ ಹಕ್ಕುಗಳ ರಕ್ಷಣೆ’ಯ ವಿಶೇಷ ಜಾಗೃತಿ ಅಭಿಯಾನಕ್ಕೆ ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಚಾಲನೆ ನೀಡಿದರು.
ಗುರುವಾರ ನಗರದ ನೂತನ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತ ಜಾಗೃತಿ ಫಲಕಗಳನ್ನು ಬಿಡುಗಡೆ ಮಾಡಿದ ಅವರು, ಬಾಲ್ಯ ವಿವಾಹ ತಡೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆಯ ಉದ್ದೇಶದಿಂದ ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಲ್ಲಿ ಈ ವಿಶೇಷ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಪ್ರಮುಖ ದೇವಸ್ಥಾನಗಳಲ್ಲಿ ಈ ಜಾಗೃತಿ ಫಲಕಗಳನ್ನು ಅಳವಡಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಶಶಿಕಾಂತ, ರೀಚ್ ಸಂಸ್ಥೆಯ ಅಧ್ಯಕ್ಷ ಸಿಂಹ ಸೇರಿದಂತೆ ಇತರರು ಇದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 