ಜಮಖಂಡಿ

ಪಾದಚಾರಿಗಳ ಹಿತದೃಷ್ಟಿಯಿಂದ ಫುಟ್ಪಾತ್ ಅಂಗಡಿಗಳ ತೆರವು

ಪಾದಚಾರಿಗಳ ಹಿತದೃಷ್ಟಿಯಿಂದ ಫುಟ್ಪಾತ್ ಅಂಗಡಿಗಳ ತೆರವು

ಲೋಕದರ್ಶನ ವರದಿ 


ಜಮಖಂಡಿ 12 : ನಗರದ ಗೀರೀಶ ನಗರದಲ್ಲಿ ರಸ್ತೆ ಪಕ್ಕದ ಫುಟ್‌ಪಾತ್‌ಗಳ ಮೇಲೆ ಇಟ್ಟುಕೊಂಡಿದ್ದ ಗೂಡಂಗಡಿಗಳನ್ನು ನಗರಸಭೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಬೆಳಗಿನ ಜಾವ ತೆರವುಗೊಳಿಸುವ ಕಾರ್ಯಾಚರಣೆ ನಡೆಸಿದರು. 

ಗೀರೀಶ ನಗರದ ಫುಟ್‌ಪಾತ್‌ಗಳ ಮೇಲೆ ಗೂಡಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದ ಅಂಗಡಿಗಳಿಂದ ಪಾದಚಾರಿಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಕಾರಣಕ್ಕೆ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ನಗರಸಭೆಯವರು ತಿಳಿಸಿದರು. 

ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಫುಟ್‌ಪಾತ್‌ಗಳ ಮೇಲಿದ್ದ ಅಂಗಡಿಗಳನ್ನು ತೆರವುಗೊಳಿಸಿದರು. 

ತೆರವು ಕಾರ್ಯಾಚರಣೆಗೆ ಅಂಗಡಿಕಾರರ ಅಳಲು : 

ಏಕಾಏಕಿ ಬೆಳಗಿನ ಜಾವ ಅಂಗಡಿಗಳನ್ನು ತೆರವುಗೊಳಿಸಿರುವುದಕ್ಕೆ ಸಣ್ಣ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದರು. ನಮ್ಮಂತಹ ಬಡವರು ಜೀವನ ನಡೆಸಲು ಸಣ್ಣಪುಟ್ಟ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದೇವೆ. ಸಾವಿರಾರು ರೂಪಾಯಿ ಬಾಡಿಗೆ ನೀಡಿ ಕಾಂಪ್ಲೆಕ್ಸ್‌ಗಳಲ್ಲಿ ಅಂಗಡಿ ಪಡೆಯುವುದು ನಮ್ಮಿಂದ ಸಾಧ್ಯವಿಲ್ಲ. ಯಾವುದೇ ಮುನ್ನೆಚ್ಚರಿಕೆ ನೋಟಿಸ್ ನೀಡದೆ ಅಧಿಕಾರಿಗಳು ಅಂಗಡಿಗಳನ್ನು ತೆರವುಗೊಳಿಸುತ್ತಿದ್ದಾರೆ ಎಂದು ಅಂಗಡಿಕಾರರು ಅಳಲು ತೋಡಿಕೊಂಡರು. 


ಸುದ್ದಿ ಓದಿ