ಮುಂದಗೋಡ

ಗಣರಾಜ್ಯೋತ್ಸವ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ

ಗಣರಾಜ್ಯೋತ್ಸವ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಪೂರ್ವಭಾವಿ ಸಭೆ


ಮುಂಡಗೋಡ 10: ತಾಲೂಕಾ ಆಡಳಿತದ ವತಿಯಿಂದ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆಯ ಕುರಿತು ಪೂರ್ವಭಾವಿ ಸಭೆ ಶುಕ್ರವಾರ ತಾಲೂಕಾ ಆಡಳಿತ ಕಚೇರಿ ಸಭಾಂಗಣದಲ್ಲಿ ನಡೆಯಿತು.  

ಸಭೆಗೆ ತಾಲೂಕಾ ದಂಡಾಧಿಕಾರಿ ಶಂಕರ ಗೌಡಿ ಅಧ್ಯಕ್ಷತೆ ವಹಿಸಿದ್ದರು.ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಾ ಕ್ರೀಡಾಂಗಣದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆಯಲ್ಲಿ ಶಿಷ್ಟಾಚಾರದ ಪ್ರಕಾರ ಗಣ್ಯರಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು. ಉಳಿದ ಗಣ್ಯರು, ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ಪತ್ರಕರ್ತರಿಗೆ ವೇದಿಕೆಯ ಮುಂಭಾಗದಲ್ಲಿ ಸೂಕ್ತ ಆಸನ ವ್ಯವಸ್ಥೆ ಮಾಡಲಾಗುವುದು ಎಂದರು.ತಾಲೂಕಿನ ಎಲ್ಲಾ ಸರ್ಕಾರಿ ಹಾಗೂ ಅರೆ ಸರ್ಕಾರಿ ಕಚೇರಿಗಳಲ್ಲಿ ಗಣರಾಜ್ಯೋತ್ಸವ ಹಾಗೂ ಧ್ವಜಾರೋಹಣ ಕಾರ್ಯಕ್ರಮವನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು. 

ಸಭೆಯಲ್ಲಿ ಇಒ ಟಿ.ವೈ. ದಾಸನಕೊಪ್ಪ, ಶಿರಸ್ತೇದಾರ ಜಿ.ಬಿ. ಭಟ್ಟ, ಬಿಆರಿ​‍್ಸ ರಾಘವೇಂದ್ರ ಗಿರಡ್ಡಿ, ರಾಘವೇಂದ್ರ ಕರೂರ ಸೇರಿದಂತೆ ಲೋಕೋಪಯೋಗಿ, ಚಿಕ್ಕ ನೀರಾವರಿ ಹಾಗೂ ಸಿಡಿಪಿಒ ಇಲಾಖೆಗಳ ಸಿಬ್ಬಂದಿಗಳು ಉಪಸ್ಥಿತರಿದ್ದರು. 


ಸುದ್ದಿ ಓದಿ