ತಾಳಿಕೋಟೆ ಕಾಂಗ್ರೆಸ್ ಕಾರ್ಯಾಲಯದಲ್ಲಿ ಗಣರಾಜ್ಯೋತ್ಸವ ಸಂಭ್ರಮ
Republic Day celebrations at Talikote Congress office
ತಾಳಿಕೋಟಿ 27: ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ 77ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ,ಶಾಸಕ ಅಪ್ಪಾಜಿ ನಾಡಗೌಡರು ಧ್ವಜಾರೋಹಣ ನೆರವೇರಿಸಿ ಮಾತನಾಡಿ ಕಾಂಗ್ರೆಸ್ ಪಕ್ಷ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಪಕ್ಷವಾಗಿದೆ ದೇಶದ ಅಭಿವೃದ್ಧಿಯಲ್ಲಿ ಕಾಂಗ್ರೆಸಿನ ಕೊಡುಗೆ ಅಪಾರವಾಗಿದೆ, ಡಾ.ಅಂಬೇಡ್ಕರ್ ಅವರು ಶ್ರೇಷ್ಠ ಸಂವಿಧಾನವನ್ನು ಕೊಟ್ಟು ಹೋಗಿದ್ದಾರೆ ಅದನ್ನು ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರಾದ ಸಿದ್ದನಗೌಡ ಪಾಟೀಲ ನಾವದಗಿ, ಪ್ರಭುಗೌಡ ಮದರ್ಕಲ್, ಎಂ.ಎ.ಮೇತ್ರಿ, ಬಿ. ಎನ್.ಹಿಪ್ಪರಗಿ, ನೀಲಮ್ಮಗೌಡ್ತಿ ಪಾಟೀಲ, ಎಂ.ಆರ್.ಮಕಾನದಾರ, ಮೋದಿನಸಾ ನಗಾರ್ಚಿ, ಸದ್ದಾಂ ಹೊನ್ನಳ್ಳಿ, ಮುದ್ದು ಪಟೇಲ, ಬಸವರಾಜ ಕುಂಬಾರ, ಅಬ್ದುಲ್ ರಜಾಕ ನಾಡಗೌಡ, ಆಸಿಫ್ ಕೆಂಭಾವಿ, ಕಾಶಿನಾಥ ದೇಸಾಯಿ,ಗೌಡಪ್ಪಗೌಡ ದೇಸಾಯಿ, ಗೋಪಾಲ ಕಟ್ಟಿಮನಿ, ಬಸ್ಸು ಮಾದರ,ಮೈನು ಹಾಗೂ ಪಕ್ಷದ ಕಾರ್ಯಕರ್ತರು ಅಭಿಮಾನಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 