ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಹಕಾರ ನೀಡುವಂತೆ ಮನವಿ
ಬ್ಯಾಡಗಿ 06: ಕಳೆದ ಐದು ವರ್ಷಗಳಲ್ಲಿ ತಾಪಂ ಅಧ್ಯಕ್ಷರಾಗಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಸೇವೆ ಸಲ್ಲಿಸುವಲ್ಲಿ ತಮಗೆ ಉತ್ತಮ ಸಹಕಾರವನ್ನು ನೀಡಿದ ಅಧಿಕಾರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ತಾಪಂ ಅಧ್ಯಕ್ಷೆ ಸವಿತಾ ಸುತ್ತಕೋಟಿ ಹೇಳಿದರು. ತಾಪಂ ಸಭಾಭವನದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸೇರಿದಂತೆ ಹಲವಾರು ಸರ್ಕಾರಿ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲು ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ನೀಡಿರುವ ಸಹಕಾರ, ಸಲಹೆ ಸೂಚನೆಗಳು ಅತ್ಯ ಅಮೂಲ್ಯವಾಗಿವೆ. ತಮ್ಮ ಅಧಿಕಾರವಧಿಯಲ್ಲಿ ಏನಾದರೂ ತಪ್ಪುಗಳು ನಡೆದಿದ್ದರೆ ಅದರ ಅನ್ಯಥಾ ಭಾವಿಸಬೇಡಿ ಎಂದರು.ತಾಪಂ ಉಪಾಧ್ಯಕ್ಷೆ ಶಾಂತಮ್ಮ ದೇಸಾಯಿ ಮಾತನಾಡಿ, ಜನಪರ ಆಡಳಿತಕ್ಕೆ ಜನಪ್ರತಿನಿಧಿಗಳೊಂದಿಗೆ ಅಧಿಕಾರ ವರ್ಗದ ಬೆಂಬಲ ಅತ್ಯವಶ್ಯವಾಗಿದೆ. ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳಿಗೆ ಅಧಿಕಾರಿಗಳು ಉತ್ತಮ ಸಹಕಾರವನ್ನು ನೀಡಿರುವುದು ತಮಗೆ ಸಂತಸ ತಂದಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ತಾಪಂ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ತಿಮ್ಮಾರೆಡ್ಡಿ, ತಹಶೀಲ್ದಾರ ರವಿಕುಮಾರ ಕೊರವರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.