ಆನೆ ದಾಳಿಗೆ ಗಾಯಗೊಂಡ ವ್ಯಕ್ತಿಗೆ ಪರಿಹಾರಕ್ಕೆ ಮನವಿ
Request for compensation for a person injured in an elephant attack
ಲೋಕದರ್ಶನ ವರದಿ
ದಾಂಡೇಲಿ 01 : ಆನೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಡಕಾನಶಿರಡಾ ಗ್ರಾಮದ ನಿವಾಸಿ ಲಕ್ಕು ಖಂಡು ಪಟ್ಕರ್ ಅವರಿಗೆ ಸೂಕ್ತ ಪರಿಹಾರ, ಪುನರ್ವಸತಿ ಹಾಗೂ ಪರ್ಯಾಯ ಉದ್ಯೋಗ ನೀಡುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿದೆ.
2025ರ ಜುಲೈ 30ರಂದು ದಾಂಡೇಲಿ ಸಮೀಪದ ಪಣಸೋಲಿ ಆನೆ ಶಿಬಿರದಲ್ಲಿ ಹೊರಗುತ್ತಿಗೆ ಆನೆ ಕಾವಾಡಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಇಲಾಖೆಯ ಸಾಕಾನೆ ದಾಳಿಯಿಂದ ಲಕ್ಕು ಪಟ್ಕರ್ ಅವರ ಮುಖ, ದವಡೆ, ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದವು.
ಅವರಿಗೆ ದಾಂಡೇಲಿ ಇಎಸ್‌ಐ ಆಸ್ಪತ್ರೆ ಹಾಗೂ ಧಾರವಾಡ ಎಸ್ಡಿಎಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ವೈದ್ಯರ ಸಲಹೆಯಂತೆ ಭಾರವಾದ ಕೆಲಸ ಮಾಡಲು ಸಾಧ್ಯವಾಗದ ಸ್ಥಿತಿ ಉಂಟಾಗಿದ್ದು, ಕುಟುಂಬದ ಜೀವನೋಪಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿ ನಿಯಮಾನುಸಾರ ಪರಿಹಾರ ಧನ, ಆರೋಗ್ಯಕ್ಕೆ ಅನುಗುಣವಾದ ಪರ್ಯಾಯ ಉದ್ಯೋಗ ಅಥವಾ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಲಾಗಿದೆ. ಪ್ರಕರಣದಲ್ಲಿ ಸೂಕ್ತ ಶಿಫಾರಸು ಮಾಡದೆ ಹಾಗೂ ಪರ್ಯಾಯ ಉದ್ಯೋಗ ಒದಗಿಸದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 