ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಮತ್ತು ನೇರ ಪಾವತಿ ಮಾಡುವಂತೆ ಮನವಿ
ಕಂಪ್ಲಿ 24: ಕಂಪ್ಲಿ ಪುರಸಭೆಯಲ್ಲಿ ಹಾಗೂ ರಾಜ್ಯದ ಇತರೆ ಮಹಾನಗರ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ ಮತ್ತು ನೇರ ಪಾವತಿ ಮಾಡುವಂತೆ, ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರು ಪಟ್ಟಣದ ಹೊಸಪೇಟೆ ಬೈಪಾಸ್ ರಸ್ತೆಯ ಶಾಸಕರ ಕಛೇರಿಯಲ್ಲಿ ಶಾಸಕ ಜೆ.ಎನ್.ಗಣೇಶ್ ಇವರಿಗೆ ಶನಿವಾರ ಮನವಿ ಪತ್ರ ಸಲ್ಲಿಸಿದರು.
ನಂತರ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರ ಸಂಘದ ಸದಸ್ಯ ಟಿ.ರಂಗನಾಥ ಮಾತನಾಡಿ, ಮೇಲ್ಕಾಣಿಸಿದ ವಿಷಯಕ್ಕೆ ಸಂಬಂಧಿಸಿದಂತೆ ತಮ್ಮ ಅವಗಾಹನೆಗೆ ತರಬಯಸುವುದೇನೆಂದರೇ, ರಾಜ್ಯದ ಮಹಾನಗರ ಪಾಲಿಕೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೂಲಭೂತ ಸೌಕರ್ಯಗಳ ಅಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ವಿಶೇಷ ನೇರ ನೇಮಕಾತಿ/ ನೇರ ಪಾವತಿ ಮಾಡುವ ಕುರಿತು ಕರ್ನಾಟಕ ರಾಜ್ಯ ಪೌರ ನೀರು ಸರಬರಾಜು ನೌಕರರ ಮಹಾ ಸಂಘದವತಿಯಿಂದ ನಾವುಗಳು ತಮ್ಮಲ್ಲಿ ವಿನಂತಿಸುತ್ತೇವೆ. ನಾವುಗಳು ದಿನಾಂಕ:21.09.2026 ರಂದು ನಾವು ತುಮಕೂರಿನ ಶ್ರೀ ಸಿದ್ದಗಂಗಾ ಮಠದಿಂದ ಬೆಂಗಳೂರು ನಗರದ ಮಾನ್ಯ ಮುಖ್ಯಮಂತ್ರಿಗಳ ಮನೆವರೆಗೆ ಪಾದಯಾತ್ರೆ ಯಶಸ್ವಿಯಾಗಿದ್ದು ಮಾಡಿದ್ದು, ನಮಗೆ ಪೌರಡಾಳಿತ ಸಚಿವರಾದ ಸನ್ಮಾನ್ಯ ಶ್ರೀ ಹೆಚ್.ಸಿ.ಬಾಲಕೃಷ್ಣರವರಿಂದ ಸ್ವಂದನೆ ದೊರೆತಿದ್ದು, ಆದರಿಂದ ತಾವುಗಳು ಕೂಡ ಮಾನ್ಯ ಮುಖ್ಯ ಮಂತ್ರಿಗಳು ಮತ್ತು ಪೌರಡಾಳಿತ ಸಚಿವರಿಗೆ ತಾವುಗಳು ದಯಮಾಡಿ ನಮ್ಮ ಬೇಡಿಕೆ ಈಡೇರಿಕೆಗೆ ಸಚಿವರಿಗೆ ಹಾಗೂ ಮುಖ್ಯ ಮಂತ್ರಿಗಳಿಗೆ ಒಂದು ಪತ್ರ ಬರೆದು ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರ ವಿಶೇಷ ನೇರ ನೇಮಕಾತಿ ಮತ್ತು ನೇರ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ನೌಕರರಾದ ಕೆ.ಸುನಿಲ್, ಹುಸೇನಪ್ಪ, ನಾಯಕರ ಭೀಮಪ್ಪ, ಚಂದ್ರಶೇಖರ, ಶಿವು, ಉಮೇಶ, ನಾಗರಾಜ, ಪರಶುರಾಮ ಸೇರಿದಂತೆ ಹೊರಗುತ್ತಿಗೆ ಪೌರ ನೀರು ಸರಬರಾಜು ನೌಕರರು ಇದ್ದರು.