ಹೊರಗುತ್ತಿಗೆ ನೌಕರರಿಂದ ಮನವಿ
Request from outsourced employees
ಹಾವೇರಿ 03: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ. ಹಾವೇರಿ ಜಿಲ್ಲಾ ಹೊರಗುತ್ತಿಗೆ ನೌಕರರ ವತಿಯಿಂದ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳಿಗೆ ಹೊರಗುತ್ತಿಗೆ ನೌಕರರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಅಂದರೆ ಸುಮಾರು ಇಪ್ಪತ್ತು ವರ್ಷಗಳಿಂದ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ 2028 ಮಾರ್ಚ ತಿಂಗಳು ಗಡುವು ವಿಧಿಸಿರುವುದನ್ನು ಮನವರಿಕೆ ಮಾಡಿ ಹೊರಗುತ್ತಿಗೆ ನೌಕರರನ್ನು ನೇರ ನೇಮಕಾತಿ ಅಥವಾ ಒಳಗುತ್ತಿಗೆಗೆ ಒಳಪಡಿಸಬೇಕೆಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಮಯದಲ್ಲಿ ಜಿಲ್ಲಾಧ್ಯಕ್ಷರಾದ ಗುರುರಾಜ ಕಂಬಳಿ, ಉಪಾಧ್ಯಕ್ಷರಾದ ದುರುಗೇಶ ವಂದವಾಗಲು, ಸುರೇಶ್ ಸಾಗರ್, ವಿರೂಪಾಕ್ಷಪ್ಪ ಹಿರೇಗೌಡರ್, ಉದಯ್ ಆಗಸನಮಟ್ಟಿ, ಮಂಜುನಾಥ್ ಕೋಳೂರು, ರೇಣುಕಾ ಕಡುಕೋಳ, ಚಂದ್ರಕಲಾ ಚಿಂದಿ, ಶಿವರಾಜ್ ಕಾಳೆ, ನಚಿಕೇತ್, ಚಂದ್ರ್ಪ ಕಳಸಪ್ಪನವರ, ಶೋಭಾ ಕಲ್ಕಟ್ಟಿ ಅಕ್ಷತಾ ಇನ್ನಿತರರು ಹಾಜರಿದ್ದರು ಸುಮಾರು 70 ಜನರು ತಂಡದೊಂದಿಗೆ ಮನವಿ ಸಲ್ಲಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 