ತಾಳಿಕೋಟಿ

ಪದವಿ ಪೂರ್ವ ಶಿಕ್ಷಣ ಇಲಾಖೆ ಹೆಸರು ಬದಲಾಯಿಸದಂತೆ ಮನವಿ

ಪದವಿ ಪೂರ್ವ ಶಿಕ್ಷಣ ಇಲಾಖೆ ಹೆಸರು ಬದಲಾಯಿಸದಂತೆ ಮನವಿ

ತಾಳಿಕೋಟಿ 23:  ಪದವಿ ಪೂರ್ವ ಶಿಕ್ಷಣ ಇಲಾಖೆ ಹೆಸರನ್ನು ಶಾಲಾ ಶಿಕ್ಷಣ (ಪದವಿ ಪೂರ್ವ) ಎಂದು ಬದಲಾಯಿಸಿರುವುದು ಮತ್ತು ಕರ್ನಾಟಕ ಪಬ್ಲಿಕ್ ಸ್ಕೂಲ್ ಹೆಸರಲ್ಲಿ ಪಿಯು ಹಂತವನ್ನು ಪ್ರೌಢ ಶಾಲೆಗಳಲ್ಲಿ ವೀಲೀನಗೊಳಿಸುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಟ್ಟು ಪದವಿ ಪೂರ್ವ ಶಿಕ್ಷಣ ಇಲಾಖೆ ಹೆಸರನ್ನೇ ಮುಂದುವರಿಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿ ಪಪೂಶಿ ಇಲಾಖೆ ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಂಘಗಳ ತಾಲೂಕ ಒಕ್ಕೂಟದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.   

ಮನವಿ ಪತ್ರದಲ್ಲಿ ಮಾಜಿ ಮುಖ್ಯಮಂತ್ರಿಗಳಾಗಿದ್ದ ಯುವಮತಿಯ ಬಂಗಾರ​‍್ಪನವರ ಹಾಗೂ ಶಿಕ್ಷಣ ಸಚಿವರಾಗಿದ್ದ ಸನ್ಮಾನ್ಯ ವೀರ​‍್ಪ ಮೊಯಿಲಿ  ಅವರ ದೂರದೃಷ್ಟಿ ಫಲವಾಗಿ ಜೂನ್ 1992 ರಂದು ಸ್ವತಂತ್ರ ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪುಗೊಂಡಿತ್ತು ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಹಂತಗಳ ನಡುವೆ ಒಂದು ಸೇತುವೆಯಾಗಿ ವಿದ್ಯಾರ್ಥಿಗಳಿಗೆ ಗುಣಾತ್ಮಕ ಹಾಗೂ ಸ್ಪರ್ಧಾತ್ಮಕ ಶಿಕ್ಷಣವನ್ನು ನೀಡುತ್ತಾ ತನ್ನದೇ ಆದ ಶೈಕ್ಷಣಿಕ ಮೌಲ್ಯ ಮತ್ತು ಅಸ್ಮಿತೆಯನ್ನು ಹೊಂದಿರುವ ಪಪೂಶಿ ಇಲಾಖೆಯನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿರುವುದು ವಿಷಾದ ನೀಯ ಇದೀಗ ಇದನ್ನು ಕಾರ್ಯರೂಪಕ್ಕೆ ತರಲಾಗಿದೆ ಇದಕ್ಕೆ ನಮ್ಮ ಸಂಪೂರ್ಣ ವಿರೋಧವಿದೆ ಇದರ ಜೊತೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ವೀಲೀನಗೊಳಿಸಿರುವ ಪರೀಕ್ಷಾ ವಿಭಾಗವನ್ನು ಹಿಂತೆಗೆದು ಪುನಃ ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿಯೇ ಉಳಿಸುವ ಮೂಲಕ ಶೈಕ್ಷಣಿಕ ವಿಭಾಗ ಮತ್ತು ಪರೀಕ್ಷಾ ವಿಭಾಗಗಳ ನಡುವೆ ಹಳಿ ತತ್ತಿರುವ ಸಮನ್ವಯವನ್ನು ಮರುಸ್ತಾಪಿಸಬೇಕು ಅಲ್ಲದೆ ಕುಸಿಯುತ್ತಿರುವ ಪರೀಕ್ಷಾ ಮೌಲ್ಯ ಪವಿತ್ರತೆಯನ್ನು ಎತ್ತಿ ಹಿಡಿಯಬೇಕು.  

ಪ್ರತಿದಿನ ಹಂತಗಳಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೇಲುಸ್ತುವಾರಿ ನಡೆಸುವ ಸಂಬಂಧ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲಾ ಪಂಚಾಯತ್ ಮತ್ತು ಅಪರಾಯುಕ್ತರು ಶಾಲಾ ಶಿಕ್ಷಣ ಇಲಾಖೆ ಇವರಿಗೆ ವಹಿಸಲು ಸರ್ಕಾರದ ಅಧೀನ ಕಾರ್ಯದರ್ಶಿಗಳು ದಿನಾಂಕ 18 -10- 2023 ರಂದು ಹೊರಡಿಸಿರುವ ಸುತ್ತೋಲೆಯನ್ನು ಕೂಡಲೆ ಹಿಂಪಡೆಯಬೇಕು ಇದರಿಂದ ಸರಾಗವಾಗಿ ನಡೆಯುತ್ತಿರುವ ಇಲಾಖೆಯ ಚಟುವಟಿಕೆಗಳು ಸಂಕೀರ್ಣಗೊಂಡು ವಿಳಂಬ ನೀತಿಗೆ ಕಾರಣವಾಗುತ್ತದೆ.  ಸರ್ಕಾರವು ಯಾವುದೇ ಶಿಕ್ಷಕರ ಸಂಘಟನೆಗಳ ಜೊತೆಗಾಗಲಿ ಶಿಕ್ಷಣ ತಜ್ಞರ ಜೊತೆಗಾಗಲಿ ಸಾಧಕ ಬಾದಕಗಳನ್ನು ಕುರಿತು ಚರ್ಚೆ ಸಮಾಲೋಚನೆಗಳು ನಡೆಸದೆ ಏಕಾಏಕಿ ಪಿಯು ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳ ನಡೆಸಲು ಉದ್ದೇಶಿಸಿರುವುದು ಸಂಪೂರ್ಣ ವೈಜ್ಞಾನಿಕ ಮತ್ತು ಅ ತಾರ್ಕಿಕ ನಿರ್ಧಾರವಾಗಿದೆ ವಿದ್ಯಾರ್ಥಿಗಳಿಗೆ ಮಾರಕವಾಗಬಹುದಾದ ಈ ಪದ್ಧತಿಯನ್ನು ಕೈ ಬಿಡಬೇಕು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ರಜೆ ರಹಿತ ಇಲಾಖೆಯನ್ನಾಗಿ ಘೋಷಿಸಿ ಇತರ ಸವಲತ್ತುಗಳನ್ನು ನೀಡಬೇಕೆಂದು ವಿನಂತಿಸುತ್ತೇವೆ ಈ ಮೇಲಿನ ನಮ್ಮ ಬೇಡಿಕೆಗಳಿಗೆ ಸರ್ಕಾರ ಸಕಾಲದಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದೆ ಹೋದಲ್ಲಿ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ ಉಪನ್ಯಾಸಕರ ಸಂಘ ಮತ್ತು ಬೋಧಕೇತರ ಸಂಘಗಳ ಒಕ್ಕೂಟವು ಬರುವ ಡಿಸೆಂಬರ್ ಒಂದರಂದು ಫ್ರೀಡಂ ಪಾರ್ಕ್‌ ನಲ್ಲಿ ಹಮ್ಮಿಕೊಂಡ ಬೃಹತ್ ಪ್ರತಿಭಟನೆಯನ್ನು ತಾಲೂಕ ಘಟವೂ ಬೆಂಬಲಿಸಿ ಅದರಲ್ಲಿ ಭಾಗವಹಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.  ಈ ಸಮಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಾಂಶುಪಾಲರು ಉಪನ್ಯಾಸಕರು ಮತ್ತು ಬೋಧಕೇತರ ಸಂಘಗಳ ತಾಳಿಕೋಟಿ ತಾಲೂಕ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು 


ಸುದ್ದಿ ಓದಿ