ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಗೆ ಸೇರಿಸಲು ಸಿಎಂಗೆ ಮನವಿ
Request to CM to include Vijayapura district under 371(J) reservation
ವಿಜಯಪುರ 20 : ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿ ವ್ಯಾಪ್ತಿಗೆ ಸೇರೆ್ಡಗೊಳಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ಅಂಗವಿಕಲರ ಮತ್ತು ಪಾಲಕರ ಒಕ್ಕೂಟದ ಮುಖಂಡರು ಸಿಂದಗಿ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೋರಾಟ ಸಮಿತಿಯ ವಿನೋದ ಖೇಡ ಮಾತನಾಡಿ, 371(ಜೆ) ಮೀಸಲಾತಿಯಿಂದ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದು ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ.
ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿ ಜಿಲ್ಲೆಯನ್ನು ಮೀಸಲಾತಿ ವ್ಯಾಪ್ತಿಗೆ ಸೇರಿಸಬೇಕೆಂದು ಆಗ್ರಹಿಸಿದರು. ಹೋರಾಟಗಾರ ಲಾಯಪ್ಪ ಇಂಗಳೆ ಮಾತನಾಡಿ, ವಿಜಯಪುರ ಜಿಲ್ಲೆ 371(ಜೆ) ಮೀಸಲಾತಿಯಿಂದ ಹೊರಗುಳಿದಿರುವುದರಿಂದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಹಾಗೂ ಯುವಕರಿಗೆ ಸರ್ಕಾರಿ ಉದ್ಯೋಗದಲ್ಲಿ ಅನ್ಯಾಯವಾಗುತ್ತಿದೆ. ಜಿಲ್ಲೆಯ ಸಚಿವರು ಮತ್ತು ಶಾಸಕರು ಮೀಸಲಾತಿ ದೊರಕಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಹೈದ್ರಾಬಾದ್ ವಿಮೋಚನಾ ಚಳವಳಿಯ ನೇತೃತ್ವ ವಹಿಸಿದ್ದ ಸಿಂದಗಿಯ ಸ್ವಾಮಿ ರಾಮಾನಂದ ತೀರ್ಥರ ತವರು ಜಿಲ್ಲೆಯನ್ನು 371(ಜೆ) ವ್ಯಾಪ್ತಿಯಿಂದ ಹೊರಗಿಟ್ಟಿರುವುದೇಕೆ ಎಂದು ಪ್ರಶ್ನಿಸಿದ ಅವರು, ಹೈಕೋರ್ಟ, ಸಾರಿಗೆ, ಪುರಾತತ್ತ್ವ ಇಲಾಖೆ, ಕರ್ನಾಟಕ ಆಡಳಿತ ನ್ಯಾಯಮಂಡಳಿ ಹಾಗೂ ಕೃಷ್ಣಾ ಕಾಡಾ ಸೇರಿದಂತೆ ಹಲವು ಆಡಳಿತಾತ್ಮಕ ಸಂಬಂಧಗಳು ಕಲ್ಯಾಣ ಕರ್ನಾಟಕದ ಜಿಲ್ಲೆಗಳೊಂದಿಗೆ ಇರುವುದರಿಂದ,
ಹಿಂದೆ ಹೈದ್ರಾಬಾದ್ ನಿಜಾಮನ ಆಡಳಿತಕ್ಕೆ ಒಳಪಟ್ಟಿದ್ದ ವಿಜಯಪುರ ಜಿಲ್ಲೆಗೂ 371(ಜೆ) ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ಎನ್. ಸುರೇಶಕುಮಾರ, ಮಲ್ಲನಗೌಡ ಪಾಟೀಲ, ಅನಿಲ ಇಕ್ಕಡೆ, ಅಶೋಕ ವಾಲಿಕಾರ, ರಾಮಚಂದ್ರ ಮೂಡಗಿ, ಲಕ್ಷ್ಮಣ ಬೂದಿಹಾಳ, ಮುತ್ತುರಾಜ ಸಾತಿಹಾಳ, ಉಮೇಶ ಕಲಹಳ್ಳಿ, ಬಾಗಪ್ಪ ಕೆ. ಹರಿಜನ, ಮಲ್ಲಪ್ಪ ದೊಡಮನಿ, ಬಸಪ್ಪ ಕೋರಳ್ಳಿ, ಮಹಾಂತಗೌಡ ಹುಗ್ಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 