ಯರಗಟ್ಟಿ

ಪೊಲೀಸ್ ಉಪ ಠಾಣೆಯನ್ನು ಮೇಲ್ದರ್ಜೆಗೇರಿಸಲು ಐಜಿ ಸತೀಶಕುಮಾರಗೆ ಮನವಿ

ಪೊಲೀಸ್ ಉಪ ಠಾಣೆಯನ್ನು ಮೇಲ್ದರ್ಜೆಗೇರಿಸಲು ಐಜಿ ಸತೀಶಕುಮಾರಗೆ ಮನವಿ

ಲೋಕದರ್ಶನ ವರದಿ 

   

ಯರಗಟ್ಟಿ 25: ಪಟ್ಟಣದ ಪೊಲೀಸ್ ಉಪ ಠಾಣೆಯನ್ನು ಮೇಲ್ದರ್ಜೆಗೆ ಏರಿಸುವಂತೆ ಒತ್ತಾಯಿಸಿ ಪಟ್ಟಣದ ವಿವಿಧ ಸಂಘಟನೆಗಳಿಂದ ಪ್ರವಾಸಿ ಮಂದಿರದಲ್ಲಿ ಗುರುವಾರ ಐಜಿ ಸತೀಶಕುಮಾರ ಅವರಿಗೆ ಮನವಿ ಸಲ್ಲಿಸಿದರು. 


ಯರಗಟ್ಟಿ ತಾಲೂಕು ಕೇಂದ್ರವಾಗಿದೆ. ಜತೆಗೆ ಬೃಹತ್ ಕೈಗಾರಿಕೆಗಳನ್ನು ಹೊಂದಿರುವ ಕೈಗಾರಿಕಾ ಪ್ರದೇಶವಾಗಿದ್ದು, ಪಟ್ಟಣದ ವ್ಯಾಪ್ತಿಯ  ವಾಸಿಸುವ ಜನರ ಸಂಖ್ಯೆ ಹೆಚ್ಚಿದೆ. ಅಲ್ಲದೇ, ಕೈಗಾರಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. 

ಹೀಗಾಗಿ ಪಟ್ಟಣಕ್ಕೆ ಪ್ರತ್ಯೇಕ ಪೊಲೀಸ್ ಠಾಣೆ ಮತ್ತು ಅಗತ್ಯವಿದೆ ಎಂದು ಗ್ರಾಮಸ್ಥರು ಹೇಳಿದರು. 


ಪಟ್ಟಣದ ಪೊಲೀಸ್ ಉಪ ಠಾಣೆಯಲ್ಲಿ ಸಿಬ್ಬಂದಿ ಸಂಖ್ಯೆ ಕಡಿಮೆಯಿದೆ. ಇದರಿಂದ ಜನರಿಗೆ ಹಾಗೂ ಕಾರ್ಮಿಕರಿಗೆ ರಕ್ಷಣೆ ಕೊಡಲು ಪೊಲೀಸ್ ಸಿಬ್ಬಂದಿಗೆ ಸಮಸ್ಯೆಯಾಗುತ್ತಿದೆ. ಜನರು ಅಪರಾಧ ಪ್ರಕರಣ ಹಾಗೂ ಇತರೆ ವಿಚಾರವಾಗಿ ಹತ್ತರಿಂದ ಹದಿನೈದು ಕಿಲೋ ಮೀಟರ್ ದೂರದ ಮುರಗೋಡ ಠಾಣೆಗೆ ಹೋಗುವ ಪರಿಸ್ಥಿತಿಯಿದೆ ಎಂದು ತಿಳಿಸಿದರು. 


ಪಟ್ಟಣವು ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಹೆಚ್ಚಿನ ಅಪಘಾತ ಹಾಗೂ ಅಪರಾಧ ಕೃತ್ಯಗಳು ನಡೆಯುತ್ತಿವೆ.  


ಪ್ರತ್ಯೇಕ ಠಾಣೆ ಆರಂಭಿಸುವಂತೆ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವಿವಿಧ ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದರು. 


ಪೊಲೀಸ್ ಉಪ ಠಾಣೆಯನ್ನು ಮೇಲ್ದರ್ಜೆಗೆ ಏರಿಸಲು ಜಾಗದ ಅನುಕೂಲವಿದೆ, ಉಪ ಠಾಣೆ ಜಮೀನನ್ನು ಇದಕ್ಕೆ ಬಳಸಿಕೊಳ್ಳಬಹುದು.  


ಕರವೇ ತಾಲೂಕು ಘಟಕದ ಅಧ್ಯಕ್ಷ ರಫೀಕ ಡಿ ಕೆ, ದಲಿತ ಮುಖಂಡರಾದ ಚಿದಂಬರ ಕಟ್ಟಿಮನಿ, ಸಿದ್ದಪ್ಪ ಮುಕ್ಕನ್ನವರ, ರಮೇಶ್ ಗಿಡ್ಡವ್ವಗೋಳ, ಅಯ್ಯಪ್ಪ ಸೋಮಾಪೂರ  ಸೇರಿದಂತೆ ಅನೇಕ ಮುಖಂಡರು ಹಾಜರಿದ್ದರು. 


ಸುದ್ದಿ ಓದಿ