ಉಪ ನೋಂದಣಿ ಕಚೇರಿ ಆರಂಭಕ್ಕೆ ಶಾಸಕರಿಗೆ ಮನವಿ
Request to MLA to open a Sub-Registrar office
ತಾಳಿಕೋಟಿ 09: ಪಟ್ಟಣದಲ್ಲಿ ಮಂಜೂರಾಗಿರುವ ಉಪ ನೋಂದಣಿ ಕಚೇರಿಯನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ತಾಳಿಕೋಟಿ ಘಟಕದ ಪದಾಧಿಕಾರಿಗಳು ಮಂಗಳವಾರ ಶಾಸಕ ಸಿ.ಎಸ್. ನಾಡಗೌಡ ಅವರಿಗೆ ಮನವಿ ಸಲ್ಲಿಸಿದರು. ತಾಳಿಕೋಟಿ ಜಿಲ್ಲೆಯ ಪ್ರಮುಖ ವ್ಯಾಪಾರ-ವಾಣಿಜ್ಯ ಕೇಂದ್ರವಾಗಿದ್ದರೂ ಉಪ ನೋಂದಣಿ ಕಚೇರಿ ಇಲ್ಲದ ಕಾರಣ ಬಡವರು, ರೈತರು ಹಾಗೂ ಸಾರ್ವಜನಿಕರು ಖರೀದಿ ನೋಂದಣಿ, ಇಸಿ, ಹಕ್ಕುಬಿಡುವಿಕೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ಮುದ್ದೇಬಿಹಾಳಕ್ಕೆ ತೆರಳಬೇಕಾಗಿದೆ. ಇದರಿಂದ ಸಮಯ ಹಾಗೂ ಹಣ ವ್ಯರ್ಥವಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ. ತಾಳಿಕೋಟಿ ತಾಲೂಕಾಗಿ ಸುಮಾರು ಹತ್ತು ವರ್ಷಗಳಾಗಿದ್ದರೂ ಉಪ ನೋಂದಣಿ ಕಚೇರಿ ಆರಂಭವಾಗಿಲ್ಲ. ಈಗಾಗಲೇ ಮಂಜೂರಾಗಿರುವ ಕಚೇರಿಯನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ, ತಾಲೂಕು ಅಧ್ಯಕ್ಷ ಗೋಪಾಲ್ ಕಟ್ಟಿಮನಿ, ಸಾಮಾಜಿಕ ಹೋರಾಟಗಾರ ಮೊಹಮ್ಮದ್ ಶಫೀಕ್ ಇನಾಮದಾರ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 