ಇಂಡಿ

ಸರಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಸದನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ಮನವಿ

ಸರಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಸದನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ಮನವಿ

ಸಿಂದಗಿ 10: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನೌಕರರು ಸರಕಾರಿ ನೌಕರರ ವಿವಿಧ ಬೇಡಿಕೆಗಳನ್ನು ಸದನದಲ್ಲಿ ಚರ್ಚಿಸುವಂತೆ ಆಗ್ರಹಿಸಿ ಶಾಸಕ ಅಶೋಕ ಎಮ್‌. ಮನಗೂಳಿ ಮತ್ತು ತಹಸೀಲ್ದಾರ ಪ್ರದೀಪಕುಮಾರ ಹಿರೇಮಠ ಅವರಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಸಿಂದಗಿ ತಾಲುಕ ಅಧ್ಯಕ್ಷ ಅಶೋಕ ತೆಲ್ಲೂರ ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ ಎಲ್ಲಾ 31 ಕಂದಾಯ ಜಿಲ್ಲೆ, 03 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲ್ಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, ಸಮಸ್ತ 6.00 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ಎಂದು ತಿಳಿಸಿದರು. 

ಮುಂದು ವರೆದು ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಾಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್‌.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. 

ಇನ್ನೂ ರಾಜ್ಯ ಸರ್ಕಾರಿ ನೌಕರರ ಸಂಘದ ಆಲಮೇಲ ತಾಲುಕ ಅಧ್ಯಕ್ಷ ರವಿ ಬಿರಾದಾರ ರವರು ಮಾತನಾಡಿ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳ ಬಗ್ಗೆ ವಿವರಣೆ ನೀಡಿದರು. 


ಸುದ್ದಿ ಓದಿ