ಸೆ.8ರ ಬೆಂಗಳೂರು ಚಲೋಗೆ ಗ್ರಾಮ ಪಂಚಾಯಿತಿ ನೌಕರರಿಗೆ ಅನುಮತಿ ನೀಡುವಂತೆ ಮನವಿ

ಸೆ.8ರ ಬೆಂಗಳೂರು ಚಲೋಗೆ ಗ್ರಾಮ ಪಂಚಾಯಿತಿ ನೌಕರರಿಗೆ ಅನುಮತಿ ನೀಡುವಂತೆ ಮನವಿ  Request to grant permission to Gram Panchayat employees for the 'Bengaluru Chalo' on September 8


ಲಕ್ಷ್ಮೇಶ್ವರ, ಸೆ.5: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಜಾರಿಯಾಗಿದ್ದರೂ ಅದನ್ನು ತಡೆಹಿಡಿದಿರುವುದು ಹಾಗೂ ಮರುಪರೀಶೀಲನೆಗಾಗಿ ಉಪಸಮಿತಿ ರಚಿಸಿರುವುದನ್ನು ವಿರೋಧಿಸಿ ಸೆ.8ರಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ‘ಬೆಂಗಳೂರು ಚಲೋ’ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಲಕ್ಷ್ಮೇಶ್ವರ ತಾಲೂಕು ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ಅನುಮತಿ ನೀಡುವಂತೆ ಒತ್ತಾಯಿಸಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಂಜುಳಾ ಹಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.  

ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಸವರಾಜ ಅಕ್ಕಸಾಲಿ ಮಾತನಾಡಿ, ರಾಜ್ಯ ಸರ್ಕಾರವು ಮೇ 22, 2026ರಂದು ಹೊರಡಿಸಿರುವ ಅಧಿಸೂಚನೆಯಂತೆ ಗ್ರಾಮ ಪಂಚಾಯಿತಿ ನೌಕರರಿಗೆ ?21,600 ಕನಿಷ್ಠ ವೇತನ ನಿಗದಿಪಡಿಸಿ ಆದೇಶ ಹೊರಡಿಸಿದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಈ ವೇತನವನ್ನು ತಡೆಹಿಡಿದು, ಮರುಪರೀಶೀಲನೆಗಾಗಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಿರುವುದು ಖಂಡನೀಯ ಎಂದರು.  

ಗ್ರಾಮ ಪಂಚಾಯಿತಿ ನೌಕರರ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸುವಂತೆ ಆಗ್ರಹಿಸಿ ಸೆ.8ರಂದು ವಿಧಾನಸೌಧ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿ ನೌಕರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.  

ಈ ಸಂದರ್ಭದಲ್ಲಿ ಮಾಂತೇಶ್ ಸುಣಗಾರ, ಶಂಕರ​‍್ಪ ಗೋಣಪ್ಪನವರ, ನಾಗರಾಜ ಜಾಡರ್, ಸಿದ್ದು ಹಡಗಟ್ಟಿ, ಮಹೇಶ್ ಮೂಲಿಮನಿ, ಹನುಮಂತಗೌಡ ಮರೇಲಿಂಗನಗೌಡ, ಫಕೀರ​‍್ಪ ಮಾದಗಿರ, ಲಿಂಗರಾಜ ಬಾಗೇವಾಡ, ಶ್ರೀಶೈಲಪ್ಪ ಬಡಿಗೇರ, ರಮೇಶ್ ಅಣ್ಣಿಗೇರಿ, ಗುಡದಪ್ಪ ಕಾಮತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.