ಚಿಕ್ಕಪಡಸಲಗಿಯಲ್ಲಿ ಪಪೂ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲು ಮನವಿ
Request to grant permission to start Papu College in Chikkapadasalagi
ಜಮಖಂಡಿ 07: ತಾಲೂಕಿನ ಚಿಕ್ಕಪಡಸಲಗಿ ಪುನರವಸತಿ ಕೇಂದ್ರದಲ್ಲಿ ಹೊಸದಾಗಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸರಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಶಿಕ್ಷಣ ಸಚಿವ ಮಧು ಬಂಗಾರ್ಪ ಅವರಿಗೆ ಮಾಜಿ ಶಾಸಕ ಆನಂದ ನ್ಯಾಮಗೌಡ ಮನವಿ ಸಲ್ಲಿಸಿದರು. ಬೆಂಗಳೂರಿನ ನಡೆದ ಅಧಿವೇಶನದ ಸಂದರ್ಭದಲ್ಲಿ ಶಿಕ್ಷಣ ಸಚಿವರ ಕಛೇರಿಯಲ್ಲಿ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಪುನರವಸತಿ ಕೇಂದ್ರದಲ್ಲಿ ಸರ್ಕಾರದಿಂದ ನಿರ್ಮಾಣಗೊಂಡಿರುವ 12 ಕೊಠಡಿಗಳ ಸುಸಜ್ಜಿತವಾದ ನೂತನ ಕಟ್ಟಡ ಜೊತೆಗೆ ಅಂದಾಜು 3 ಎಕರೆ ಆಟದ ಮೈದಾನ ಹೊಂದಿದೆ. ಜಿಲ್ಲೆ ಉಪನಿರ್ದೇಶಕರು ಶಾಲಾ ಶಿಕ್ಷಣ ಪದವಿ ಪೂರ್ವ ಇಲಾಖೆಗೆ ಭೇಟಿ ನೀಡಿದ್ದು. ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪಪೂ) ಬೆಂಗಳೂರು ಅವರಿಗೆ ವರದಿ ಸಲ್ಲಿಸಲಾಗಿದೆ. ತಾಲೂಕಿನ ಚಿಕ್ಕಪಡಸಲಗಿಯಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಸರಕಾರಿ ಪದವಿಪೂರ್ವ ಕಾಲೇಜು ಪ್ರಾರಂಭಿಸಲು ಅನುಮತಿ ನೀಡಬೇಕೆಂದು ಮನವಿಯನ್ನು ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 