ಮುದ್ದೆಬಿಹಾಲ್

ಪಿಂಜಾರ ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹಿಸಿ ಮನವಿ

ಪಿಂಜಾರ ನದಾಫ್ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಲು ಆಗ್ರಹಿಸಿ ಮನವಿ

ಮುದ್ದೇಬಿಹಾಳ 24: ಕರ್ನಾಟಕ ರಾಜ್ಯಾದ್ಯಂತ ಸುಮಾರು 22 ರಿಂದ 25 ಲಕ್ಷಗಳ ಜನಸಂಖ್ಯೆ ಹೊಂದಿರುವ ನದಾಫ್,ಪಿಂಜಾರ ಜನಾಂಗವು ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಓದ್ಯೋಗಿಕ, ರಾಜಕೀಯ ಹಾಗೂ ಹಲವಾರು ರಂಗಗಳಲ್ಲಿ ಅತ್ಯಂತ ಹಿಂದುಳಿದ ಮತ್ತು ಕಡುಬಡತನದ ನೆರಳಲ್ಲಿ ಕಷ್ಟಕರ ಜೀವನವನ್ನು ನಡೆಸುತ್ತಿರುವ ಶೋಷಿತ ಸಮಾಜವಾಗಿದೆ.

ಸಧ್ಯ ಈ ಜನಾಂಗವು ಇಸ್ಲಾಂ ಧರ್ಮದ ಮುಸ್ಲಿಂ (ಅಲ್ಪಸಂಖ್ಯಾತರ) ಪಂಗಡದಲ್ಲಿದ್ದರೂ ಸಹ ಸರಕಾರದ ವೃತ್ತಿಪರ ಜಾತಿಗಳ ವಿಂಗಡನೆ ಅನ್ವಯ ನದಾಫ್, ಪಿಂಜಾರ ಉಪ ಪಂಗಡಕ್ಕೆ ಸೇರಿದ್ದು, ಹಿಂದುಳಿದ ವರ್ಗಗಳ ಇಲಾಖೆಗೆ ಸಂಬಂಧಿಸಿದ ಪ್ರವರ್ಗ-1 ರ ಮೀಸಲಾತಿಯನ್ನು ಹೊಂದಿದೆ. ಸರಕಾರದ ನಿರ್ದೇಶನದಂತೆ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಮತ್ತು ಇತರ ಯೋಜನೆಗಳಿಂದ ಸೌಲಭ್ಯಗಳನ್ನು ಪಡೆದುಕೊಳ್ಳುವಲ್ಲಿ ಸತತವಾಗಿ ತಾಂತ್ರಿಕ ದೋಷಗಳಿಂದ ಹಾಗೂ ಅಧಿಕಾರಿಗಳ ನಿರ್ಲಕ್ಷತೆಯಿಂದ ಯಾವದೇ ಯೋಜನೆಗಳು ಸರಿಯಾಗಿ ತಲುಪದೇ ವಂಚಿತರಾಗುತ್ತಿದ್ದು, ಇದರ ನಿವಾರಣೆಗಾಗಿ ಹಲವಾರು ವರುಷಗಳಿಂದ ಹೋರಾಟ ನಡೆಸುವ ಮೂಲಕ ಆಯಾ ಸರಕಾರಕ್ಕೆ ಮನವಿ ಸಲ್ಲಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ನೇರವಾಗಿ ಅನುಕೂಲವಾಗಲೆಂದು ಪ್ರತ್ಯೇಕ ನಿಗಮ ಮಂಡಳಿಗೆ ಬೇಡಿಕೆಯನ್ನು ಸಲ್ಲಿಸಲಾಗಿತ್ತು. ಹಿಂದಿನ ಸರಕಾರ ಈ ಸಮಾಜದ ತೊಂದರೆಗಳನ್ನು ಗಮನಿಸಿ ಸಾಮಾಜಿಕ ಕಳಕಳಿಯಿಂದ ಜನಾಂಗಕ್ಕೆ ನೇರವಾಗಿ ಸೌಲಭ್ಯಗಳನ್ನು ಪಡೆದುಕೊಳ್ಳಲು ಪಿಂಜಾರ, ನದಾಫ್ ಹಾಗೂ ಇತರೆ 13 ಜಾತಿಗಳ ಅಭಿವೃದ್ಧಿ ನಿಗಮದ ಆದೇಶದೊಂದಿಗೆ ಘೋಷಣೆ ಮಾಡಿದೆ. ನಂತರ ಈ ಹೊಸ ಸರಕಾರ ಬಂದನಂತರ ಸಮಾಜದ ಹಿತದೃಷ್ಟಿಯಿಂದ ಹಾಗೂ ಜನಸಂಖ್ಯೆ ಆಧಾರದ ಮೇಲೆ ಯೋಜನೆಗಳನ್ನು ರೂಪಿಸಲು ಬಜೆಟ್‌ನಲ್ಲಿ ಅಥವಾ ವಿಶೇಷ ಪ್ಯಾಕೇಜ ಮೂಲಕ ಅವಶ್ಯವಾಗಿದೆ ಕಾರಣ ರಾಜ್ಯಸರಕಾರ ನಮ್ಮ ಬೇಡಿಕೆ ಈಡೇರಿಸುವ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು. 


ಸುದ್ದಿ ಓದಿ