ಕೊಪ್ಪಳ

ರಾಷ್ಟ್ರೀಯ ಆಯುರ್ವೇದ ದಿನಾಚರಣೆಗೆ ಅಧಿಕೃತ ಆದೇಶ ಹೊರಡಿಸಲು ಮನವಿ

ರಾಷ್ಟ್ರೀಯ ಆಯುರ್ವೇದ ದಿನಾಚರಣೆಗೆ ಅಧಿಕೃತ ಆದೇಶ ಹೊರಡಿಸಲು ಮನವಿ


ಕೊಪ್ಪಳ, ಸೆ.23: ಜಿಲ್ಲೆಯಲ್ಲಿ ಪ್ರತಿವರ್ಷ ಸೆ.23ರಂದು ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅಧಿಕೃತವಾಗಿ ಆಚರಿಸಲು ಸೂಕ್ತ ಆದೇಶ ಹೊರಡಿಸುವಂತೆ ಆಗ್ರಹಿಸಿ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಜಿಲ್ಲಾ ಆಯುಷ್ ಅಧಿಕಾರಿ ಪರ್ವತಗೌಡ ಹಿರೇಗೌಡ್ರ ಅವರಿಗೆ ಮನವಿ ಸಲ್ಲಿಸಿದರು.  

ಭಾರತ ಸರ್ಕಾರದ ಆಯುಷ್ ಸಚಿವಾಲಯವು ಪ್ರಾಚೀನ ವೈದ್ಯಕೀಯ ಪದ್ಧತಿ ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಯ ಹಿತದೃಷ್ಟಿಯಿಂದ ಪ್ರತಿವರ್ಷ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ದೇಶಾದ್ಯಂತ ಆಚರಿಸುತ್ತಿದೆ. ಆದರೆ ಕೊಪ್ಪಳ ಜಿಲ್ಲೆಯಲ್ಲಿ ಈ ಕುರಿತು ವ್ಯಾಪಕ ಜಾಗೃತಿ ಹಾಗೂ ಅಧಿಕೃತ ಕಾರ್ಯಕ್ರಮಗಳು ನಡೆಯದಿರುವುದು ಸಾರ್ವಜನಿಕರಲ್ಲಿ ನಿರಾಸೆ ಮೂಡಿಸಿದೆ ಎಂದು ಸಂಘಟನೆಗಳ ಒಕ್ಕೂಟ ತಿಳಿಸಿದೆ.  

ಪ್ರಮುಖ ಬೇಡಿಕೆಗಳು:  

ಸಿಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿವರ್ಷ ಸೆ.23ರಂದು ನಿಯಮಾನುಸಾರ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ನಡೆಸಲು ಸ್ಪಷ್ಟ ಆದೇಶ ಹೊರಡಿಸಬೇಕು.  

ಸಿಶಾಲಾ-ಕಾಲೇಜುಗಳು ಹಾಗೂ ಪಂಚಾಯಿತಿ ವ್ಯಾಪ್ತಿಯಲ್ಲಿ ಆಯುರ್ವೇದ ಜಾಗೃತಿ ಜಾಥಾ, ಓಷಧೀಯ ಸಸ್ಯಗಳ ಪ್ರದರ್ಶನ ಮತ್ತು ಉಚಿತ ವಿತರಣೆ, ಉಚಿತ ಆಯುರ್ವೇದ ತಪಾಸಣಾ ಶಿಬಿರಗಳನ್ನು ಆಯೋಜಿಸಬೇಕು.  

ಸಿಆಯುರ್ವೇದ ಆಸ್ಪತ್ರೆಗಳ ವೈದ್ಯಾಧಿಕಾರಿಗಳು ಸಕ್ರಿಯವಾಗಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಸೂಚಿಸಬೇಕು.  

ಸಿವಾರ್ತಾ ಇಲಾಖೆಯ ಮೂಲಕ ಆಯುರ್ವೇದದ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು.  

ಸಾರ್ವಜನಿಕ ಆರೋಗ್ಯ ಸುಧಾರಣೆ ಹಾಗೂ ಸಾಂಪ್ರದಾಯಿಕ ವೈದ್ಯಕೀಯ ಪರಂಪರೆಯ ಸಂರಕ್ಷಣೆಯ ದೃಷ್ಟಿಯಿಂದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್‌.ಎ. ಗಫಾರ್, ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಮುಖ್ಯ ಸಂಚಾಲಕ ಬಸವರಾಜ ಶೀಲವಂತರ ಹಾಗೂ ಪಾಸ್ಟರ್ಸ್‌ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಚನ್ನಬಸಪ್ಪ ಅಪ್ಪಣ್ಣವರ ಒತ್ತಾಯಿಸಿದರು. 


ಸುದ್ದಿ ಓದಿ