ಬಣಜಿಗ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಉದ್ಯೋಗ ಮೀಸಲಾತಿ ಕಲ್ಪಿಸುವಂತೆ ಮನವಿ
Request to provide employment reservation for the Banajiga community under Category 2A
ಸವದತ್ತಿ 23 : ಬಣಜಿಗ ಜಾತಿಗೆ ಸೇರಿದ ಸಮುದಾಯವನ್ನು ಪ್ರವರ್ಗ 2ಎ ಅಡಿಯಲ್ಲಿ ಉದ್ಯೋಗ ಮೀಸಲಾತಿಗಾಗಿ ಪರಿಗಣಿಸಿ ಆದೇಶ ನೀಡುವಂತೆ ಕೋರಿ, ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್ ಮಲ್ಲಿಕಾರ್ಜುನ ಹೆಗ್ಗನ್ನವರ ಅವರ ಮೂಲಕ ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಮೈಸೂರು ಜಿಲ್ಲೆಯ ಕೊಳ್ಳೇಗಾಳದ ಸಮುದಾಯದ ಶಿಕ್ಷಕಿ ಸುಮಿತ್ರಾ ವಿ.ಎಸ್. ಅವರ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಎನ್.ಸಿ. ಏಪ್ರಿಲ್ 09, 2025 ರಂದು ವಿಚಾರಣೆ ನಡೆಸಿದ್ದ ಗೌರವಾನ್ವಿತ ಉಚ್ಚ ನ್ಯಾಯಾಲಯದ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ಮಹತ್ವದ ತೀಪು ನೀಡಿದ್ದಾರೆ.
ಬಣಜಿಗ ಸಮುದಾಯವನ್ನು ಶಿಕ್ಷಣದ ಉದ್ದೇಶಕ್ಕಾಗಿ ಪ್ರವರ್ಗ ಬಿ ಹಾಗೂ ಉದ್ಯೋಗ ಉದ್ದೇಶಕ್ಕಾಗಿ ಪ್ರವರ್ಗ ಡಿ ಅಡಿಯಲ್ಲಿ ವಿಭಿನ್ನವಾಗಿ ವರ್ಗೀಕರಿಸುವುದು ಕಾನೂನುಬಾಹಿರ ಮತ್ತು ಸಂವಿಧಾನದ ಪರಿಚ್ಛೇದ 14ರ ಉಲ್ಲಂಘನೆಯಾಗುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಿಕ್ಷಣಕ್ಕೆ ಒಂದು ರೀತಿಯ ವರ್ಗೀಕರಣ ಮತ್ತು ಉದ್ಯೋಗಕ್ಕೆ ಮತ್ತೊಂದು ರೀತಿಯ ದ್ವೈತ ವರ್ಗೀಕರಣ ಮಾಡುವುದನ್ನು ತಳ್ಳಿಹಾಕಿರುವ ಪೀಠವು, ಬಣಜಿಗ ಸಮುದಾಯವನ್ನು ಸಂವಿಧಾನದ ಪರಿಚ್ಛೇದ 16(4) ರ ಅಡಿಯಲ್ಲಿ ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಪ್ರವರ್ಗ 2ಎ ಅಡಿಯಲ್ಲಿಯೇ ಮರು ವರ್ಗೀಕರಿಸಬೇಕೆಂದು ಆದೇಶಿಸಿದೆ.
ಬಣಜಿಗ ಸಮುದಾಯವು ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವುದರಿಂದ ಸರ್ಕಾರಿ ನೇಮಕಾತಿಗಳಲ್ಲಿ ಅವಕಾಶ ವಂಚಿತರಾಗುತ್ತಿದ್ದು, ಇದು ಸಂವಿಧಾನದ ಸದಾಶಯಕ್ಕೆ ವ್ಯತಿರಿಕ್ತವಾಗಿದೆ. ಆದ್ದರಿಂದ, ಉಚ್ಚ ನ್ಯಾಯಾಲಯದ ತೀರ್ಿನಂತೆ ಬಣಜಿಗ ಸಮುದಾಯವನ್ನು ಸಂವಿಧಾನದ ಪರಿಚ್ಛೇದ 16(4) ರ ಅಡಿಯಲ್ಲಿ ಗ್ರೂಪ್ ಡಿ ಬದಲಿಗೆ ಗ್ರೂಪ್ ಬಿ ಪ್ರವರ್ಗ 2ಎ ಅಡಿಯಲ್ಲಿಯೇ ಮರು ವರ್ಗೀಕರಿಸಿ, ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಲು ಸಂಬಂಧಿಸಿದ ಇಲಾಖೆಗೆ ಸೂಕ್ತ ಆದೇಶ ನೀಡಬೇಕೆಂದು ಮುಖಂಡರು ಒತ್ತಾಯಿಸಿದ್ದಾರೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 