ಬಳ್ಳಾರಿ

ಬಳ್ಳಾರಿ ನಗರದಲ್ಲಿ ಸರಕಾರಿ ಇಂಜಿನಿಯರಿಂಗ್ ಆರಂಭಿಸುವಂತೆ ಆಗ್ರಹಿಸಿ ಮನವಿ

ಬಳ್ಳಾರಿ ನಗರದಲ್ಲಿ ಸರಕಾರಿ ಇಂಜಿನಿಯರಿಂಗ್ ಆರಂಭಿಸುವಂತೆ ಆಗ್ರಹಿಸಿ ಮನವಿ

ಬಳ್ಳಾರಿ16: ಬಳ್ಳಾರಿ ಜಿಲ್ಲೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೀಸಲಿರುವ ಜಿಲ್ಲಾ ಖನಿಜ ನಿಧಿ, ಕೆ.ಎಂ.ಆರ್.ಇ.ಸಿ. ಅನುದಾನ ವರವಾಗಿದೆ. ಜಿಲ್ಲೆಯ ಸಂಪನ್ಮೂಲವನ್ನು ಬಳಸಿಕೊಂಡು ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾ ಕೇಂದ್ರಸ್ಥಾನವಾದ ಬಳ್ಳಾರಿ ನಗರದಲ್ಲಿ ಸರಕಾರಿ ಇಂಜಿನಿಯರಿಂಗ್ ಆರಂಭಿಸಲು ರಾಜ್ಯ ಸರಕಾರ ಮುಂದಾಗಬೇಕೆಂದು ಕರ್ನಾಟಕ ಜನಸೈನ್ಯದ ವತಿಯಿಂದ ಇಂದು ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎರ್ರಿಸ್ವಾಮಿ ಅವರು ಮಾತನಾಡುತ್ತಾ, ಬಳ್ಳಾರಿ ಜಿಲ್ಲೆ ಕಲೆ, ಸಂಸ್ಕೃತಿ, ಕೃಷಿ, ರಾಜಕೀಯ ಸೇರಿ ನಾನಾ ಕ್ಷೇತ್ರಗಳಲ್ಲಿ ಗಮನಸೆಳೆದಿದೆ. ರಾಜ್ಯದಲ್ಲಿಯೇ ಅತಿ ಹೆಚ್ಚು ಕೈಗಾರಿಕೋದ್ಯಮಗಳನ್ನು ಹೊಂದುವ ಮೂಲಕ ಕೈಗಾರಿಕೋದ್ಯಮಗಳ ತವರೂರಾಗಿದೆ. ಗಣಿಗಾರಿಕೆ ಮೂಲಕ ರಾಷ್ಟ್ರ ಮಟ್ಟದಲ್ಲೂ ಹೆಸರುವಾಸಿಯಾಗಿದೆ. ಆದರೆ, ಜಿಲ್ಲೆಯಲ್ಲಿ ಸಾಕ್ಷರತೆ ಪ್ರಮಾಣ ಶೇ. 67.43 ರಷ್ಟಿದೆ. ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಶೈಕ್ಷಣಿಕ ಗುಣಮಟ್ಟ ಸುಧಾರಿಸಲು, ಗುಣಮಟ್ಟದ ಶಿಕ್ಷಣ ನೀಡುವಲ್ಲಿ ರಾಜ್ಯ ಸರಕಾರ ಇಚ್ಛಾಶಕ್ತಿ ತೋರಬೇಕಿದೆ ಎಂದರು.

ಈ ಹಿಂದೆ ಅಖಂಡ ಬಳ್ಳಾರಿ ಜಿಲ್ಲೆಯಾಗಿದ್ದ ಸಂದರ್ಭದಲ್ಲಿ ಇಂಜಿನಿಯರಿಂಗ್ ಪದವಿ ಕಾಲೇಜನ್ನು ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಇಚ್ಛಾಶಕ್ತಿಯಿಂದ ಹೂವಿನಹಡಗಲಿಯಲ್ಲಿ ಇಂಜಿನಿಯರಿಂಗ್ ಕಾಲೇಜು ಆರಂಭಿಸಲಾಗಿತ್ತು. ಆದರೆ, ಪ್ರಸ್ತುತ ಬಳ್ಳಾರಿ ಜಿಲ್ಲೆಯಿಂದ ಹೂವಿನಹಡಗಲಿ, ಹರಪನಹಳ್ಳಿ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಹಾಗೂ ಹೊಸಪೇಟೆ ಸೇರಿ ನೂತನವಾಗಿ ವಿಜಯನಗರ ಜಿಲ್ಲೆಯಾಗಿ ವಿಭಜನೆಗೊಂಡಿದೆ ಎಂದರು.

ಹೀಗಾಗಿ ಬಳ್ಳಾರಿ ಜಿಲ್ಲೆ ಸರಕಾರಿ ಇಂಜಿನಿಯರಿಂಗ್ ಕಾಲೇಜ್ನಿಂದ ವಂಚಿತವಾಗಿದೆ. ಬಳ್ಳಾರಿಯಲ್ಲಿ ಎರಡು ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳಿದ್ದು, ಬಡ ವಿದ್ಯಾಥರ್ಿಗಳು ಹೆಚ್ಚಿನ ಹಣವನ್ನು ನೀಡಿ ಕಾಲೇಜು ಸೇರಲು ಕಷ್ಟ ಸಾಧ್ಯವಾಗಿದೆ. ಇದರಿಂದ ಇಂಜಿನಿಯರಿಂಗ್ ಪದವಿ ಕನಸನ್ನು ಹೊತ್ತ ಜಿಲ್ಲೆಯ ಅನೇಕ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿಯಿಂದ ವಂಚಿತರಾಗುವಂತೆ ಮಾಡಿದೆ. ಜಿಲ್ಲೆಯ ಸಾಕ್ಷರತೆ ಪ್ರಮಾಣ ಹೆಚ್ಚಿಸಲು ಹಾಗೂ ಜಿಲ್ಲೆಯಲ್ಲಿ ಸರಕಾರಿ ಇಂಜಿನಿಯರಿಂಗ್ ಕಾಲೇಜು ಆರಂಭಿಸಲು ರಾಜ್ಯ ಸರಕಾರ ಕೂಡಲೇ ಕ್ರಮಕೈಗೊಳ್ಳಬೇಕೆಂದರು.

ರಾಜ್ಯ ಉಪಾಧ್ಯಕ್ಷ ಬಿ.ಹೊನ್ನೂರಪ್ಪ, ಉತ್ತರ ಕನರ್ಾಟಕ ಉಪಾಧ್ಯಕ್ಷ ಫಯಾಜ್ ಭಾಷ, ಮುಖಂಡ ನಾಸೀರ್ ಭಾಷ, ಆಯೇಷಾ ಸಿದ್ದಿಕಾ, ಪದ್ಮಾವತಿ, ರೇಖಾ, ಹಸೇನ್, ಸೊಹೈಲ್ ಮತ್ತಿತರರು ಉಪಸ್ಥಿತರಿದ್ದರು 

ಸುದ್ದಿ ಓದಿ