ಮಣಿಪುರ ಮಹಿಳೆಯರ ಬೆತ್ತಲೆ ಪ್ರಕರಣ ಖಂಡಿಸಿ ರಾಷ್ಟ್ರಪತಿಗಳಿಗೆ ಮನವಿ
ಜಮಖಂಡಿ 17: ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಬೆತ್ತಲೆಗೊಳಿಸಿದ ಹೇಯ ಕೃತ್ಯವನ್ನು ಮಾದಿಗ ಸಂಘಟನೆಗಳ ಒಕ್ಕೂಟ ಖಂಡಿಸಿದೆ.
ಡಾ. ಬಿಆರ್ ಅಂಬೇಡ್ಕರ ಅವರು ಶ್ರೇಷ್ಠ ಸಂವಿಧಾನ ರಚಿಸಿ 72 ವರ್ಷಗಳು ಕಳೆದವು. ಈ ದೇಶದಲ್ಲಿ ದಲಿತರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ, ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ಇನ್ನು ನಿಂತಿಲ್ಲ. ಇಂಥ ಹೇಯ ಕೃತ್ಯಗಳು ನಡೆಯುತ್ತಿವೆಂದರೆ ಆಘಾತಕಾರಿ ವಿಷಯವಾಗಿದೆ. ಮಣಿಪುರದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಮಾಡಿ ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿದ ಅಮಾನವೀಯ ಕೃತ್ಯವನ್ನು ಮಾದಿಗ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದ್ದು, ಈ ಕೃತ್ಯವೆಸಗಿದ ಕ್ರೂರಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುತ್ತದೆ.
ಮಣಿಪುರದಲ್ಲಿ ಮಹಿಳೆಯರನ್ನು ಅತ್ಯಾಚಾರ ಮಾಡಿ ಬೆತ್ತಲೆ ಮೆರವಣಿಗೆ ಮಾಡಿ ಪೈಶಾಚಿಕ ಕೃತ್ಯ ಎಸಗಿ ಇಡೀ ಭಾರತ ದೇಶವೇ ತಲೆ ತಗ್ಗಿಸುವಂತಾಗಿದೆ ಇಡೀ ದೇಶಕ್ಕೆ ಇದು ಕಳಂಕ ತಂದ ಕೃತ್ಯ ಇಂತಹ ಘಟನೆಗಳನ್ನು ನಡೆಸಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು.
ರಾಜಸ್ಥಾನದಲ್ಲಿ ದಲಿತ ಯುವತಿಯನ್ನು ಅಪಹರಿಸಿ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಬುಡಕಟ್ಟು ಮಹಿಳೆಯರನ್ನು ಬೆತ್ತಲೆ ಮಾಡಿ ಥಳಿಸಿ ದೌರ್ಜನ್ಯ ಮಾಡಲಾಗಿದೆ. ಬಿಹಾರದಲ್ಲಿ ಬಾಲಕಿ ಮತ್ತು ಶಿಕ್ಷಕನೊಬ್ಬನನ್ನು ಬೆತ್ತಲೆಗೊಳಿಸಿ ದೌರ್ಜನ್ಯ ಎಸಗಿದ್ದಾರೆ. ಈ ದೇಶದಲ್ಲಿ ಈ ರೀತಿ ಬೆತ್ತಲೆಗೊಳಿಸಿ ಅತ್ಯಾಚಾರ ಕೊಲೆ ನಿರಂತರವಾಗಿ ನಡೆಯುತ್ತಿವೆ. ಇದು ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೊಡ್ಡ ದೌರ್ಜನ್ಯವಾಗಿವೆ.
ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಗಮನಹರಿಸಬೇಕು. ಇಲ್ಲದಿದ್ದರೆ ಈ ಘಟನೆಗಳ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಮಹಿಳೆಯರಿಗೆ ಗೌರವ ಕೊಡಬೇಕೆಂದು ರಾಷ್ಟ್ರಪತಿಗಳಲ್ಲಿ ಮಾದಿಗ ಸಂಘಟನೆ ಮುಖಂಡ ಮುತ್ತಣ್ಣ ಮೇತ್ರಿ, ವಿಲಾಸ ನಡುವಿನಮನಿ, ಮಾರುತಿ ಮಾದರ, ಉದಯ ಕಡಕೋಳ, ಗೋವಿಂದ ಗಸ್ತಿ, ಸಂಜು ಬಾಳಪ್ಪಗೋಳ, ಸುನಿಲ ಮೇತ್ರಿ, ಸಂಜು ಪೂಜಾರಿ, ಯಮನಪ್ಪ ಲಿಂಗನೂರ ಮನವಿ ಮಾಡಿದ್ದಾರೆ.