ಯುವಕ ಸಂಘಗಳ ಮೂಲಕ ಒಂದು ಸಾವಿರ ಗಿಡಗಳನ್ನು ನೆಡುವ ಸಂಕಲ್ಪ : ಸಿದ್ದಣ್ಣ ದುರದುಂಡಿ
Resolve to plant one thousand trees through youth associations: Siddanna Duradundi
ಮೂಡಲಗಿ, 09 : ಸಕಾಲಕ್ಕೆ ಮಳೆ ಮತ್ತು ಸಮೃದ್ಧ ಪರಿಸರಕ್ಕಾಗಿ ಮರಗಿಡಗಳನ್ನು ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ. ಪರಿಸರವನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ, ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಬೆಳಗಾವಿ ಜಿಲ್ಲಾಧ್ಯರು ಹಾಗೂ ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಯುವಕರಿಗೆ ಕರೆ ನೀಡಿದರು.ನಗರದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಭಾರತ ಸರ್ಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಮೈ ಭಾರತ ಕೇಂದ್ರ ಬೆಳಗಾವಿ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘ ಹಳ್ಳೂರ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಮೂಡಲಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ’ವಿಶ್ವ ಪರಿಸರ ದಿನಾಚರಣೆ’ ನಿಮಿತ್ಯ ಯುವ ಸಂಘಗಳಿಗೆ ಹಾಗೂ ಶಿಬಿರಾರ್ಥಿಗಳಿಗೆ ಸಸಿ ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಾ ಬೆಳಗಾವಿ ಜಿಲ್ಲೆಯಲ್ಲಿ ಯುವತಿ ಮಂಡಳ, ಯುವಕ ಸಂಘಗಳು, ಮಹಿಳಾ ಮಂಡಳಗಳ ಮೂಲಕ ಒಂದು ತಾಲೂಕಿಗೆ ನೂರರಂತೆ ಜಿಲ್ಲೆಯಲ್ಲಿ ಒಂದು ಸಾವಿರ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡುವ ಸಂಕಲ್ಪ ಮಾಡಿದ್ದೇವೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘದ ಅಧ್ಯಕ್ಷ ಸುಭಾಸ ಗೊಡ್ಯಾಗೋಳ ಮಾತನಾಡಿ, "ಇಂದಿನ ದಿನಮಾನದಲ್ಲಿ ಕಾಂಕ್ರೀಟ್ ರಸ್ತೆ ಮತ್ತು ಮನೆಗಳ ನಿರ್ಮಾಣಕ್ಕಾಗಿ ಪರಿಸರವನ್ನು ನಾಶ ಮಾಡಲಾಗುತ್ತಿದೆ. ಇದರಿಂದ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದು, ಪ್ರಾಣಿ-ಪಕ್ಷಿಗಳು ನೀರು ಮತ್ತು ಗಾಳಿಯಿಲ್ಲದೆ ಸಂಕಷ್ಟ ಅನುಭವಿಸುತ್ತಿವೆ. ಮನುಷ್ಯ ಇನ್ನಾದರೂ ಎಚ್ಚೆತ್ತುಕೊಂಡು ಪರಿಸರ ಉಳಿಸುವ ವ್ಯವಸ್ಥೆಯನ್ನು ಮಾಡಬೇಕಿದೆ," ಎಂದು ಎಚ್ಚರಿಸಿದರು. ಅಧ್ಯಕ್ಷತೆ ವಹಿಸಿದ್ದ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಂಸ್ಥಾಪಕ ಲಕ್ಷ್ಮಣ ಅಡಿಹುಡಿ ಮಾತನಾಡಿ, "ಕೇವಲ ಸಸಿ ನೆಡುವುದು ಮಾತ್ರವಲ್ಲ, ನೆಟ್ಟ ಸಸಿಗಳನ್ನು ಪೋಷಿಸಿ ಮರವಾಗಿ ಬೆಳೆಸುವವರೆಗೂ ನಾವು ಜವಾಬ್ದಾರಿ ವಹಿಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಸಿದ್ದಣ್ಣ ದುರದುಂಡಿ ಅವರು ಪರಿಸರ ಜಾಗೃತಿ ಮಾಡುತ್ತಿದಾರೆ. ಹಾಗಾಗಿ ಪ್ರತಿಯೊಬ್ಬರು ಪರಿಸರ ಸಂರಕ್ಷಣೆಗೆ ಕೈ ಜೋಡಿಸಬೇಕು," ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಮಂಜುನಾಥ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಯರಾದ ಶಿಲ್ಪಾ ಗಡಾದ, ಶಿಕ್ಷಕ ರವಿ ಕರಿಗಾರ, ಮಂಜು ರೆಳೆಕರ, ಕೃಷ್ಣ ಸರ್, ಹಣಮಂತ ಅಂಗಡಿ, ಪೈಲಾವಾನ್ ಮಾರುತಿ ಸಿಂಧೆ, ಅಭಿಷೇಕ್ ಕಟ್ಟಿಮನಿ ಹಾಗೂ ಸೈನಿಕ ತರಬೇತಿ ಶಿಬಿರದ ವಿದ್ಯಾರ್ಥಿಗಳು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 