ಜೀವ ಉಳಿಸುವ ಕೌಶಲ ಅರಿವು ಮೂಡಿಸಿದ ಪುನರುಜ್ಜೀವನ ಜಾಗೃತಿ ದಿನ
Resuscitation Awareness Day: Raising awareness about life-saving skills
ವಿಜಯಪುರ 23 : ಜೀವ ಉಳಿಸುವ ಅತ್ಯಮೂಲ್ಯ ಕೌಶಲ್ಯವಾದ ಪುನರುಜ್ಜೀವನ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬಿ.ಎಲ್.ಡಿ.ಇ. ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿ ವಿಜಯಪುರ ಘಟಕದ ಸಂಯುಕ್ತ ಆಶ್ರಯದಲ್ಲಿ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಪುನರುಜ್ಜೀವನ ಜಾಗೃತಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಹಠಾತ್ ಹೃದಯದ ಕಾರ್ಯ ಸ್ಥಗಿತಗೊಂಡಂತಹ ತುರ್ತು ಸಂದರ್ಭಗಳಲ್ಲಿ ಜೀವ ಉಳಿಸಲು ಅಗತ್ಯವಾದ ಪ್ರಾಥಮಿಕ ಚಿಕಿತ್ಸಾ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಹಾಗೂ ಪ್ರಾಯೋಗಿಕ ತರಬೇತಿ ನೀಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ 2025ರ ಚಾಪ್ಟರ್ ಅಧ್ಯಕ್ಷರಾದ ಡಾ. ಎಸ್. ವಿ. ಪಾಟೀಲ, ವಿಜಯಪುರ ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ. ಎಸ್. ಎಸ್. ಕಲ್ಯಾಣಶೆಟ್ಟರ್, ಜಿಲ್ಲಾ ಕಾರ್ಯದರ್ಶಿ ಡಾ. ಅತುಲ್ ತೊಬ್ಬಿ, ಮುಖ್ಯ ತರಬೇತುದಾರರಾದ ಡಾ. ಜೆ. ಪ್ರಕಾಶ ವೇಮಣ್ಣ ಹಾಗೂ ಸಮನ್ವಯ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ಸಿದ್ದು ಬಿರಾದಾರ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ತರಬೇತುದಾರರಾಗಿ ಡಾ. ಜೆ. ಪ್ರಕಾಶ ವೇಮಣ್ಣ ಅವರು ಪುನರುಜ್ಜೀವನದ ಮಹತ್ವ, ತುರ್ತು ಪರಿಸ್ಥಿತಿಯಲ್ಲಿ ಅನುಸರಿಸಬೇಕಾದ ಕ್ರಮಗಳು, ಎದೆ ಒತ್ತುವಿಕೆಯ ಸರಿಯಾದ ವಿಧಾನ, ಕೃತಕ ಉಸಿರಾಟ ನೀಡುವ ವಿಧಾನ ಹಾಗೂ ಜೀವ ಉಳಿಸುವ ಮೂಲಭೂತ ತಂತ್ರಗಳ ಕುರಿತು ವಿದ್ಯಾರ್ಥಿಗಳಿಗೆ ಸವಿಸ್ತಾರವಾಗಿ ಮಾಹಿತಿ ನೀಡಿದರು. ಪ್ರತಿಯೊಬ್ಬ ನಾಗರಿಕರೂ ಈ ಜೀವ ರಕ್ಷಕ ಕೌಶಲ್ಯವನ್ನು ಕಲಿಯಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು.
ತರಬೇತುದಾರರಾಗಿ ಡಾ. ಅನೀಲಕುಮಾರ ಸಜ್ಜನ, ಡಾ. ಈ ಮೂಲಕ ವಿದ್ಯಾರ್ಥಿಗಳಿಗೆ ಪುನರುಜ್ಜೀವನದ ವಿಧಾನವನ್ನು ಪ್ರಾಯೋಗಿಕವಾಗಿ ಕಲಿಸಿಕೊಟ್ಟರು. ಹೃದಯದ ಕಾರ್ಯ ಏಕಾಏಕಿ ನಿಂತಾಗ ಸಮಯೋಚಿತವಾಗಿ ಮತ್ತು ಸರಿಯಾದ ವಿಧಾನದಲ್ಲಿ ಸಿಪಿಆರ್ ನೀಡಿದರೆ ಅಮೂಲ್ಯ ಜೀವಗಳನ್ನು ಉಳಿಸಬಹುದೆಂಬ ಸಂದೇಶವನ್ನು ವೈದ್ಯರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ತುರ್ತು ಸಂದರ್ಭಗಳಲ್ಲಿ ಧೈರ್ಯ, ಸಮಯಪ್ರಜ್ಞೆ ಮತ್ತು ಸರಿಯಾದ ಕ್ರಮದ ಮಹತ್ವವನ್ನು ಉದಾಹರಣೆಗಳೊಂದಿಗೆ ವಿವರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಜೀವ ರಕ್ಷಕ ಕೌಶಲ್ಯವನ್ನು ಪ್ರಾಯೋಗಿಕವಾಗಿ ಅಭ್ಯಾಸ ಮಾಡಿದರು. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದರೊಂದಿಗೆ ಸಮಾಜದಲ್ಲಿ ಜೀವ ರಕ್ಷಕ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನೆರವೇರಿತು.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 