ನಿವೃತ್ತ ಮುಖ್ಯ ಶಿಕ್ಷಕಿ ಚನ್ನಬಸಮ್ಮ ಶೆಟ್ರು ಅವರಿಗೆ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ
ಲೋಕದರ್ಶನ ವರದಿ
ಕಂಪ್ಲಿ, ಆ. 2: ತಾಲೂಕಿನ ದೇವಲಾಪುರ ಗ್ರಾಮದ ಪಿ.ಎಂ.ಶ್ರೀ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಬಳಗದ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕಿ ಚನ್ನಬಸಮ್ಮ ಶೆಟ್ರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಭಾವಿಕಟ್ಟೆ ಹೊನ್ನೂರಸ್ವಾಮಿ ಮಾತನಾಡಿ, ಸರ್ಕಾರಿ ಶಾಲೆಯಲ್ಲಿ ಸುಮಾರು 39 ವರ್ಷಗಳ ಕಾಲ ಸೇವೆ ಸಲ್ಲಿಸಿದ ಚನ್ನಬಸಮ್ಮ ಶೆಟ್ರು ಅವರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಶಾಲೆಯ ಹಾಗೂ ವಿದ್ಯಾರ್ಥಿಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ತಮ್ಮ ಸೇವಾ ಅವಧಿಯವರೆಗೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ ಎಂದು ಹೇಳಿದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಮುಖ್ಯ ಶಿಕ್ಷಕಿ ಚನ್ನಬಸಮ್ಮ ಶೆಟ್ರು, ತಮ್ಮ ಸೇವಾ ಅವಧಿಯಲ್ಲಿ ಸಹಕಾರ ನೀಡಿದ ಸಹೋದ್ಯೋಗಿಗಳು, ವಿದ್ಯಾರ್ಥಿಗಳು, ಪಾಲಕರು ಹಾಗೂ ಗ್ರಾಮಸ್ಥರಿಗೆ ಧನ್ಯವಾದಗಳನ್ನು ಅರ್ಿಸಿದರು.
ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿಗಳಾದ ಪಿ. ರಾಜಸಾಬ್, ವಿ. ಜಗದೀಶ್, ಪಿ. ರವಿಕುಮಾರ್, ಕೋರಿಮಂಜುನಾಥ್, ಗೌಡ್ರ ಪ್ರಕಾಶ್, ಪಿ. ಖಾದರ್ ಬಾಷಾ, ಕೆ. ಕಲಾವತಿ, ಇ. ಮಂಜುಳಾ, ಕೆ. ಹೇಮಾವತಿ, ಎಚ್. ಮಂಜಮ್ಮ, ಎಚ್. ಅನಿಲ್, ಕೆ. ನಳಿನಾಬೇಬಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಮುಖ್ಯಗುರುಗಳು, ಶಿಕ್ಷಕರು, ಪಾಲಕರು, ಗ್ರಾಮ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಸ್ಡಿಎಂಸಿ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.