ನಾಡ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ
ಬ್ಯಾಡಗಿ 03: ತಾಲೂಕಿನ ಕಾಗಿನೆಲೆ ಗ್ರಾಮದಲ್ಲಿರುವ ನಾಡ ಕಚೇರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಗುರುವಾರ ಧಿಡೀರ್ ಭೇಟಿ ನೀಡಿ ಪರೀಶೀಲನೆ ನಡೆಸಿದರು.
ಗುರುವಾರ ಹಾವೇರಿ ಜಿಲ್ಲೆಗೆ ಆಗಮಿಸಿದ್ದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ರಾಣೆಬೆನ್ನೂರ ತಹಸೀಲ್ದಾರ ಕಚೇರಿ ನಂತರ ಬ್ಯಾಡಗಿ ತಾಲೂಕಿನ ಕಾಗಿನೆಲೆ ಗ್ರಾಮಕ್ಕೆ ಭೇಟಿ ನೀಡಿ ನಾಡ ಕಚೇರಿಗೆ ತೆರಳಿದರು.
ಬಳಿಕ ನಾಡಕಚೇರಿಯಲ್ಲಿನ ಎಲ್ಲ ವ್ಯವಸ್ಥೆಗಳನ್ನು ಪರೀಶೀಲನೆ ನಡೆಸಿದರು, ಈವೇಳೆ ಸಾರ್ವಜನಿಕರ ಕೆಲಸಗಳನ್ನು ಯಾವುದೇ ಕಾರಣ ಕ್ಕೂ ವಿಳಂಬ ಮಾಡದೇ ನಿಗದಿತ ಅವಧಿಯಲ್ಲಿ ಮಾಡಿಕೊಡುವಂತೆ ಖಡಕ್ ಸೂಚನೆ ನೀಡಿದರು.
ಕಚೇರಿಯಲ್ಲಿನ ಸಂಗ್ರಹಿಸಡಲಾಗಿದ್ದ ಸಾರ್ವಜನಿಕರ ಕಡತಗಳನ್ನು ಹಾಳಾಗದಂತೆ ಹಾಗೂ ಸಮರ್ಕವಾಗಿ ಸಂಗ್ರಹಣೆ ಮಾಡುವಂತೆ ಸೂಚನೆ ನೀಡಿದರು. ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ. ಹಾನಗಲ್ ಶಾಸಕ ಶ್ರೀನಿವಾಸ ಮಾನೆ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ. ತಹಸೀಲ್ದಾರ್ ಎಸ್.ಎ.ಪ್ರಸಾದ, ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.