ಸೆ.12ರಂದು ಬಳ್ಳಾರಿ ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ: ಪಿ.ಟಿ. ಪರಮೇಶ್ವರ ನಾಯ್ಕ್ ಪ್ರವಾಸ
Review of 'Guarantee Schemes' progress in Ballari district on Sept. 12: P.T. Parameshwar Naik's visi
ಬಳ್ಳಾರಿ, ಸೆ.11: ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ್ ಅವರು ಸೆ.12ರಂದು ಬಳ್ಳಾರಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿ ಕುರಿತು ಪರೀಶೀಲನೆ ನಡೆಸಲಿದ್ದಾರೆ.
ಸೆ.12ರಂದು ಬೆಳಗ್ಗೆ 9 ಗಂಟೆಗೆ ಹರಪನಹಳ್ಳಿಯಿಂದ ಪ್ರಯಾಣ ಆರಂಭಿಸಲಿರುವ ಅವರು, ಬೆಳಗ್ಗೆ 11.30ಕ್ಕೆ ಬಳ್ಳಾರಿಗೆ ಆಗಮಿಸಲಿದ್ದಾರೆ. ಬಳಿಕ ಬಳ್ಳಾರಿ ಗ್ರಾಮೀಣ ಶಾಸಕ ಬಿ. ನಾಗೇಂದ್ರ ಅವರ ನೇತೃತ್ವದಲ್ಲಿ ರೂಪನಗುಡಿಯಲ್ಲಿ ಹಮ್ಮಿಕೊಂಡಿರುವ ‘ಪ್ರಜಾಸೇವಾ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 1 ಗಂಟೆಯಿಂದ ಬಳ್ಳಾರಿ ಜಿಲ್ಲೆಯ ಐವರು ಶಾಸಕರೊಂದಿಗೆ ಸಭೆ ನಡೆಸಲಿದ್ದು, ಗ್ರಾಮ ಪಂಚಾಯಿತಿ ಹಾಗೂ ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿಗಳ ರಚನೆ ಕುರಿತು ಚರ್ಚೆ ನಡೆಸಲಿದ್ದಾರೆ. ಸಭೆಯ ಬಳಿಕ ಬಳ್ಳಾರಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಸೆ.13ರಂದು ಬೆಳಗ್ಗೆ 11 ಗಂಟೆಗೆ ಹೊಸಪೇಟೆಗೆ ಪ್ರಯಾಣಿಸಲಿದ್ದು, ಬಳಿಕದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಪ್ರಾಧಿಕಾರದ ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಕಾಂತಾರಾಜು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 