ಗೋಕಾಕ್

ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಪುರಸ್ಕಾರ

ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಪುರಸ್ಕಾರ

ಲೋಕದರ್ಶನ ವರದಿ

ಗೋಕಾಕ 21: ರಾಜ್ಯ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದತ್ಯೆ ನೀಡಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾಥರ್ಿಗಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳ ಪ್ರಯೋಜನ ಪಡೆದು ಜಿಲ್ಲೆ, ರಾಜ್ಯ, ದೇಶದಾದ್ಯಂತ ಹೆಸರು ಮಾಡುವಂತೆ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕರೆ ನೀಡಿದರು.

    ಮಂಗಳವಾರದಂದು ನಗರದ ಸಚಿವರ ಕಾಯರ್ಾಲಯದಲ್ಲಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಹಾಗೂ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ದ್ವಿತೀಯ ಪಿಯುಸಿಯಲ್ಲಿ ಪರೀಕ್ಷೆಗೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾಥರ್ಿಗಳಿಗೆ ಪುರಸ್ಕಾರ ನೀಡಿ ಗೌರವಿಸಿ ಮಾತನಾಡುತ್ತಿದ್ದರು. 

ಇಂದಿನ ತಾಂತ್ರಿಕ ಯುಗದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅತ್ಯವಶ್ಯಕ ಆರೋಗ್ಯಕರ ಸ್ಫಧರ್ೆ ನಡೆಸಿ ತಮ್ಮ ಜೀವನವನ್ನು ಉಜ್ವಲಗೊಳಿಸಿಕೊಂಡು ಪಾಲಕರಿಗೆ ಕೀತರ್ಿ ತರಬೇಕೆಂದು ಹೇಳಿದರು. ಸತ್ಕಾರ ಸ್ವೀಕರಿಸಿ ಮಾತನಾಡಿದ ವಿದ್ಯಾಥರ್ಿನಿ ಆರತಿ ಐದುಡ್ಡಿ ಪ್ರತಿಭಾನ್ವಿತ ವಿದ್ಯಾಥರ್ಿಗಳನ್ನು ಗುರುತಿಸಿ ಸತ್ಕರಿಸುತ್ತಿರುವ ಸಚಿವರ ಕಾರ್ಯ ಮಾದರಿಯಾಗಿದ್ದು, ಈ ಪ್ರೋತ್ಸಾಹದಿಂದ ನಾವೆಲ್ಲಾ ಸಾಧಕರಾಗಿ ಜಿಲ್ಲೆಗೆ ಕೀತರ್ಿ ತರುತ್ತೇವೆಂದು ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ ಸದಸ್ಯರುಗಳಾದ ಟಿ.ಆರ್. ಕಾಗಲ್, ಮಡೆಪ್ಪ ತೋಳಿನವರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿದರ್ೇಶಕ ಎಂ.ಎಂ.ಕಾಬಂಳ , ಬಿಇಓ ಜಿ.ಬಿ.ಬಳಗಾರ ಉಪಸ್ಥಿತರಿದ್ದರು.

ಸುದ್ದಿ ಓದಿ