ವಿಜಯಪುರ

ಮುಳಸಾವಳಗಿ ಜಿಪಂ ಕ್ಷೇತ್ರದ ಎನ್‌.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಿಯಾಜ ಯಲಗಾರ ಸಿದ್ಧತೆ

ಮುಳಸಾವಳಗಿ ಜಿಪಂ ಕ್ಷೇತ್ರದ ಎನ್‌.ಡಿ.ಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಸ್ಪರ್ಧಿಸಲು ರಿಯಾಜ ಯಲಗಾರ ಸಿದ್ಧತೆ
Riyaz Yalagara prepares to contest as the NDA alliance candidate for the Mulasavalagi Zilla Panchaya

 ದೇವರಹಿಪ್ಪರಗಿ 24: ತಾಲೂಕಿನ ಮುಳಸಾವಳಗಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಎನ್ಡಿಎ ಮೈತ್ರಿಕೂಟದ ಪ್ರಬಲ ಆಕಾಂಕ್ಷಿಯಾಗಿ ಜೆಡಿಎಸ್ ಪಕ್ಷದ ತಾಲೂಕು ಘಟಕದ ಮಾಜಿ ಅಧ್ಯಕ್ಷ ಹಾಗೂ ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿರುವ ಯುವ ರಿಯಾಜ ಯಲಗಾರ ಅವರು ಸ್ಪರ್ಧೆಯ ಇಂಗಿತ ವ್ಯಕ್ತಪಡಿಸಿದ್ದಾರೆ. ಪಟ್ಟಣದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಸರ್ವಜನರೊಂದಿಗೆ ಉತ್ತಮ ಒಡನಾಟ ಹೊಂದಿರುವ ರಿಯಾಜ ಯಲಗಾರ ಅವರು, ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಆಪ್ತರಾಗಿ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಲ್ಲಿ ಸಹಕಾರ ನೀಡುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಆಶೀರ್ವಾದ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಮತ್ತು ಜನಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರ ಬೆಂಬಲಿಗರು ತಿಳಿಸಿದ್ದಾರೆ. ಮತಕ್ಷೇತ್ರದ ಏಳು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಿದರೂ ಸ್ಪರ್ಧಿಸಲು ಸಿದ್ಧನಿದ್ದೇನೆ ಎಂದು ರಿಯಾಜ ಯಲಗಾರ ಹೇಳಿದ್ದಾರೆ. ಗ್ರಾಮಗಳ ಅಭಿವೃದ್ಧಿಗೆ ಆದ್ಯತೆಜಿಲ್ಲಾ ಪಂಚಾಯಿತಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳ, ತಾಂಡಾ, ಅಲ್ಪಸಂಖ್ಯಾತರ ಹಾಗೂ ದಲಿತರ ಕಾಲೋನಿ ಗಳಲ್ಲಿ ಸಿಸಿ ರಸ್ತೆ ನಿರ್ಮಾಣ, ಆರೋಗ್ಯ ಸೇವೆಗಳ ಸುಧಾರಣೆ, ಶಿಕ್ಷಣಕ್ಕೆ ಆದ್ಯತೆ ಹಾಗೂ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುವುದು ತಮ್ಮ ಪ್ರಮುಖ ಉದ್ದೇಶವಾಗಿದೆ. ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರ ಸಹಕಾರದೊಂದಿಗೆ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿರುವ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು, ಕಾರ್ಯಕರ್ತರು ಹಾಗೂ ಮತದಾರರ ಸಹಕಾರದೊಂದಿಗೆ ಚುನಾವಣಾ ಕಣಕ್ಕಿಳಿಯುವ ಆಶಯ ಹೊಂದಿದ್ದಾರೆ. 


ಸುದ್ದಿ ಓದಿ