ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ಯುವಕ ಸಾವು

ರಸ್ತೆ ಗುಂಡಿ ತಪ್ಪಿಸಲು ಹೋಗಿ ಅಪಘಾತ: ಯುವಕ ಸಾವು

ಬೆಂಗಳೂರು, ಸೆ.17  ಬಿಬಿಎಂಪಿಯ ನಿರ್ಲಕ್ಷ್ಯಕ್ಕೆ ಮತ್ತೊಂದು ಜೀವ ಬಲಿಯಾಗಿದೆ.  ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವಕನೋರ್ವ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಗರದ ರಾಜ್​​ ಕುಮಾರ್ ಸಮಾಧಿ ರಸ್ತೆ ಬಳಿ ನಡೆದಿದೆ.


ಶಿರಸಿ ಮೂಲದ ಮನೋಜ್ (28) ಮೃತ ದುರ್ದೈವಿ.
ಖಾಸಗಿ ಕಂಪನಿಯ ಉದ್ಯೋಗಿಯಾಗಿರುವ ಮನೋಜ್, ನಿನ್ನೆ ರಾತ್ರಿ​ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದಾಗ ರಾಜ್​​ ಕುಮಾರ್ ಸಮಾಧಿ ರಸ್ತೆಯಲ್ಲಿ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಹಿಂಬದಿಯಿಂದ ಬಂದ ಬೈಕ್​ ಡಿಕ್ಕಿಯಾಗಿದ್ದು, ಮನೋಜ್​ ಸ್ಥಳದಲ್ಲೇ ಮೃತಪಟ್ಟಿದ್ದಾರೆ.


ಸ್ಥಳಕ್ಕೆ ರಾಜಾಜಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸದ್ಯ ಮನೋಜ್​ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಆತನ ಪೋಷಕರಿಗೆ ಸುದ್ದಿ ಮುಟ್ಟಿಸಲಾಗಿದೆ.

ಸುದ್ದಿ ಓದಿ