ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ
Road development works launched
ಬೆಳಗಾವಿ 08 : ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಒತ್ತು ನೀಡಲಾಗಿದ್ದು, ಚಿಕ್ಕುಬಾಗ್, ಸಹ್ಯಾದ್ರಿ ನಗರ, ಆಶ್ರಯ ಕಾಲೋನಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುಮಾರು 11 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಅತ್ಯಂತ ಪ್ರಮುಖವಾಗಿದೆ.
ರಸ್ತೆಗಳ ಅಭಿವೃದ್ಧಿಯಿಂದ ಸಾರ್ವಜನಿಕರ ದೈನಂದಿನ ಸಂಚಾರ ಸುಗಮವಾಗುವುದರ ಜೊತೆಗೆ ವಿದ್ಯಾರ್ಥಿಗಳು, ಉದ್ಯೋಗಿಗಳು, ವ್ಯಾಪಾರಸ್ಥರು ಸೇರಿದಂತೆ ಎಲ್ಲ ವರ್ಗದ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಗರ ಪ್ರದೇಶಗಳಿಗೆ ಹೊಂದಿಕೊಂಡಿರುವ ಬಡಾವಣೆಗಳು ಹಾಗೂ ಗ್ರಾಮೀಣ ಭಾಗಗಳಲ್ಲೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಅಗತ್ಯವಿರುವ ಕಡೆಗಳಲ್ಲಿ ಹೊಸ ರಸ್ತೆಗಳ ನಿರ್ಮಾಣ, ಹಳೆಯ ರಸ್ತೆಗಳ ಸುಧಾರಣೆ, ಒಳಚರಂಡಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಾರ್ವಜನಿಕರ ಸಂಚಾರ ಸುಗಮಗೊಳಿಸುವುದು ಮತ್ತು ಪ್ರತಿಯೊಂದು ಪ್ರದೇಶಕ್ಕೂ ಉತ್ತಮ ರಸ್ತೆ ಸಂಪರ್ಕ ಕಲ್ಪಿಸುವುದು ನಮ್ಮ ಆದ್ಯತೆ. ಜನರ ಬೇಡಿಕೆಗಳನ್ನು ಪರಿಗಣಿಸಿ ಅಗತ್ಯವಿರುವ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು. ರಸ್ತೆ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಅವರು, ಸಾರ್ವಜನಿಕರ ತೆರಿಗೆ ಹಣದಿಂದ ನಡೆಯುವ ಕಾಮಗಾರಿಗಳು ದೀರ್ಘಕಾಲ ಬಾಳಿಕೆ ಬರುವಂತಿರಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಕಾಮಗಾರಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹಾಗೂ ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಗಳನ್ನು ಸಮರ್ಕವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ರಸ್ತೆ ಅಭಿವೃದ್ಧಿಯಿಂದ ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆ ಈಡೇರಿದಂತಾಗಿದ್ದು, ಸಂಚಾರ ವ್ಯವಸ್ಥೆ ಹಾಗೂ ಬಡಾವಣೆಗಳ ಸಂಪರ್ಕ ಮತ್ತಷ್ಟು ಸುಧಾರಿಸಲಿದೆ. ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 