ಮೂಲಭೂತ ಸೌಲಭ್ಯಕ್ಕಾಗಿ ಸಾರ್ವಜನಿಕರ ರಸ್ತೆ ತಡೆ ಪ್ರತಿಭಟನೆ: ಪಾಲಿಕೆ ಸದಸ್ಯ ಮುಂಡ್ಲೂರ್ ಪ್ರಭಂಜನ್ ಕುಮಾರ್ ಆಕ್ರೋಶ
ಬಳ್ಳಾರಿ 12 : ಮಹಾನಗರ ಪಾಲಿಕೆ ವ್ಯಾಪ್ತಿಯ 3ನೇ ವಾರ್ಡ್ನ ಬಂಡೀಮೋಟ್ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆ, ಒಳಚರಂಡಿ ಸ್ವಚ್ಛತೆ ಹಾಗೂ ರಸ್ತೆ ಸ್ವಚ್ಛತೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳು ವಿಫಲರಾಗಿದ್ದಾರೆ ಕೂಡಲೇ ಮೂರನೇ ವಾರ್ಡಿನ ಸಾರ್ವಜನಿಕರಿಗೆ ಸಕಾಲಕ್ಕೆ ಕುಡಿಯುವ ನೀರಿನ ಸರಬರಾಜು ಒಳಚರಂಡಿ ರಸ್ತೆ ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆಗ್ರಹಿಸಿ, ಪಾಲಿಕೆ ಸದಸ್ಯ ಮುಂಡ್ಲೂರು ಪ್ರಭಂಜನ್ ನೇತೃತ್ವದಲ್ಲಿ ಸೋಮವಾರ ಸ್ಥಳೀಯ ನಿವಾಸಿಗಳು ಬಂಡಿ ಮೋಟ್ ಪ್ರದೇಶದ ಮಸೀದಿ ಹತ್ತಿರ ರಸ್ತೆ ತಡೆ ಪ್ರತಿಭಟನೆ ನಡೆಸಿದರು.
ರಸ್ತೆ ತಡೆ ಪ್ರತಿಭಟನೆಯಲ್ಲಿ ಮಾತನಾಡಿದ ಪಾಲಿಕೆ ಸದಸ್ಯ ಮುಂಡ್ಲೂರು ಪ್ರಭಂಜನ್, ಕಳೆದ 15 ದಿನಗಳಿಂದ ವಾರ್ಡ್ನಲ್ಲಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಒಳಚರಂಡಿ , ರಸ್ತೆಗಳನ್ನೂ ಸ್ವಚ್ಛಗೊಳಿಸುತ್ತಿಲ್ಲ. ಇದರಿಂದ ಸ್ಥಳೀಯ ನಿವಾಸಿಗಳು ತೀವ್ರ ತೊಂದರೆ ಅನುಭವಿಸುವಂತಾಗಿದೆ, ಸ್ವಚ್ಛತೆ ಇಲ್ಲದೆ ಇರುವುದರಿಂದ ಮಕ್ಕಳು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ,
ಕೂಡಲೇ ಮಹಾನಗರ ಪಾಲಿಕೆ ನಗರದ ಮೂರನೇ ವಾರ್ಡಿನ ಸಾರ್ವಜನಿಕರಿಗೆ ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು. ನೀರಿನ ಪೂರೈಕೆ, ಒಳಚರಂಡಿ ನಿರ್ವಹಣೆ ಹಾಗೂ ರಸ್ತೆ ಸ್ವಚ್ಛತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿ, ವಾರ್ಡ್ನ ನಿವಾಸಿಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತರನ್ನು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಆಯುಕ್ತ ಮಂಜುನಾಥ್ ಮಾತನಾಡಿ, 3ನೇ ವಾರ್ಡಿನ ಮೂಲಭೂತ ಸೌಲಭ್ಯಗಳ ಬಗ್ಗೆ ನನ್ನ ಗಮನಕ್ಕೆ ಬಂದಿರುವುದಿಲ್ಲ ಈಗ ಪಾಲಿಕೆ ಸದಸ್ಯ ಪ್ರಪಂಚನ್ ಕುಮಾರ್ ಮತ್ತು ನಾಗರಿಕರು ಪ್ರತಿಭಟನೆಯ ಮೂಲಕ ನನ್ನ ಗಮನಕ್ಕೆ ತಂದಿದ್ದಾರೆ ತಕ್ಷಣವೇ ಈ ವಾರ್ಡಿನ ಸ್ವಚ್ಛತೆ ಕಾರ್ಯವನ್ನು ಆರಂಭಿಸಿ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ವಾಪಸ್ ಪಡೆದು ಮೂರನೇ ವಾರ್ಡಿನ ಪ್ರದೇಶದ ಸಮಸ್ಯೆಗಳನ್ನು ಖುದ್ದಾಗಿ ಅರಿಯುವಂತೆ ಪ್ರದೇಶದ ವಿವಿಧ ಸ್ಥಳಗಳಿಗೆ ಕರೆದೆ ಇದು ತೋರಿಸಿದರು.