ಮೋದಗಾ ಗ್ರಾಮದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ
Roadwork launched in Modaga village
ಬೆಳಗಾವಿ ಸೆ.6: ಬೆಳಗಾವಿ ಗ್ರಾಮೀಣ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಸುಮಾರು 1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ರೈತ ಸಂಪರ್ಕ ರಸ್ತೆ ಹಾಗೂ ಸ್ಮಶಾನಕ್ಕೆ ತೆರಳುವ ರಸ್ತೆ ಕಾಮಗಾರಿಗೆ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.
ರೈತರು ತಮ್ಮ ಜಮೀನುಗಳಿಗೆ ಸುಲಭವಾಗಿ ತೆರಳಲು, ಕೃಷಿ ಚಟುವಟಿಕೆಗಳಿಗೆ ಅಗತ್ಯ ವಸ್ತುಗಳು ಹಾಗೂ ಕೃಷಿ ಉತ್ಪನ್ನಗಳ ಸಾಗಣೆಗೆ ಅನುಕೂಲವಾಗುವಂತೆ ರೈತ ಸಂಪರ್ಕ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇದರೊಂದಿಗೆ ಸ್ಮಶಾನಕ್ಕೆ ತೆರಳುವ ರಸ್ತೆಯನ್ನೂ ಅಭಿವೃದ್ಧಿಪಡಿಸಲಾಗುತ್ತಿದ್ದು, ಗ್ರಾಮಸ್ಥರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶ ಹೊಂದಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ಮೂಲಸೌಕರ್ಯ ಅತ್ಯಂತ ಪ್ರಮುಖವಾಗಿದ್ದು, ಜನರ ಅಗತ್ಯ ಹಾಗೂ ಬೇಡಿಕೆಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ಮುಂದಿನ ದಿನಗಳಲ್ಲಿಯೂ ಮೋದಗಾ ಗ್ರಾಮದ ಅಗತ್ಯ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು. ಗ್ರಾಮಸ್ಥರು ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮದ ಹಿರಿಯರು, ಕಾಂಗ್ರೆಸ್ ಮುಖಂಡರು, ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ರಸ್ತೆ ಕಾಮಗಾರಿಗೆ ಚಾಲನೆ ನೀಡಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 