‘ರಾಬರ್ಟ್’ ಹೊಸ ಪೋಸ್ಟರ್ ರಿಲೀಸ್ : 3 ಶೇಡ್ ಗಳಲ್ಲಿ ಡಿ ಬಾಸ್
ಬೆಂಗಳೂರು, ಅ 09 : ಡಿ ಬಾಸ್ ದರ್ಶನ್ ನಟನೆಯ ರಾಬರ್ಟ್ ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರಲು ಸಜ್ಜಾಗಿದೆ. ಈಗಾಗಲೇ ಹಾಡುಗಳ ಮೂಲಕ ಬಹಳ ಹೈಪ್ ಕ್ರಿಯೇಟ್ ಮಾಡಿರುವ ರಾಬರ್ಟ್ ಇದೀಗ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್ ನೀಡಿದೆ.ನಿರ್ದೇಶಕ ತರುಣ್ ಸುಧೀರ್ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ಬೆಳಗ್ಗೆ 10 ಗಂಟೆಗೆ ರಿಲೀಸ್ ಮಾಡಲಾಗಿದೆ. ಈ ಬಗ್ಗೆ ಅಕ್ಟೋಬರ್ 8ರಂದು ಸಾಮಾಜಿಕ ಜಾಲತಾಣದಲ್ಲಿ ತರುಣ್ ಸುಧೀರ್ ಬಹಿರಂಗ ಪಡಿಸಿದ್ದರು.
ಕುತೂಹಲ ಮೂಡಿಸುವ ಪೋಸ್ಟರ್ ನಲ್ಲಿ ದರ್ಶನ್ ಮೂರು ಶೇಡ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ. ಸದ್ಯದಲ್ಲೇ ಚಿತ್ರಮಂದಿರಕ್ಕೆ ಎಂಟ್ರಿ ಕೊಡುವುದಾಗಿ ಪೋಸ್ಟರ್ ನಲ್ಲಿ ಹೇಳಲಾಗಿದೆ. ಆದಾಗ್ಯೂ ರಾಬರ್ಟ್ ಸಿನಿಮಾ ಈ ವರ್ಷ ತೆರೆಗೆ ಬರುವುದು ಅನುಮಾನವಾಗಿದೆ.ಇದೇ 15ರ ನಂತರ ಚಿತ್ರಮಂದಿರ ತೆರೆಯಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದರೂ, ಸ್ಟಾರ್ ನಟರ ಚಿತ್ರಗಳು ರಿಲೀಸ್ ಆಗುವುದು ಅನುಮಾನ ಎಂದು ಹೇಳಲಾಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟ ರ್ ನಲ್ಲಿ ಈ ಪೋಸ್ಟರ್ ಅನ್ನು ಶೇರ್ ಮಾಡಿ "A Brother from another Mother ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನೆ ತರುಣ್ ಸುಧೀರ್, ನಿಮ್ಮ ದಾಸ ದರ್ಶನ್" ಎಂದು ಹಾರೈಸಿದ್ದಾರೆ ರಾಬರ್ಟ್ ಚಿತ್ರದಲ್ಲಿ ದರ್ಶನ್ ಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನಿರ್ದೇಶಿಸಿದ್ದಾರೆ.