ನಿತ್ಯ ಯೋಗದಿಂದ ಸದೃಢ ಆರೋಗ್ಯ ಸಾಧ್ಯ
Robust health is possible through daily yoga.
ನಿತ್ಯ ಯೋಗದಿಂದ ಸದೃಢ ಆರೋಗ್ಯ ಸಾಧ್ಯ
ರಾಯಬಾಗ 16: ಪ್ರತಿನಿತ್ಯ ಯೋಗ ಮಾಡುವುದರಿಂದ ಸದೃಢ ಆರೋಗ್ಯ ಹೊಂದಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಜನಜಾಗೃತಿ ನಿರ್ದೇಶಕ ವಸಂತ ಹೊಸಮನಿ ಹೇಳಿದರು.
ಅವರು ಅಳಗವಾಡಿ ಗ್ರಾಮದ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ 33ನೇ ಶಿವಾನುಭವ ಗೋಷ್ಠಿಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
"ಆಹಾರವೇ ಓಷಧವಾಗಬೇಕು; ಓಷಧವೇ ಆಹಾರವಾಗಬಾರದು" ಎಂದು ಅವರು ತಿಳಿಸಿದರು. ನಿಯಮಿತ ಯೋಗಾಭ್ಯಾಸ ಹಾಗೂ ಆರೋಗ್ಯಕರ ಜೀವನಶೈಲಿಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಆಶೀರ್ವಚನ ನೀಡಿದ ಬಸವರಾಜ ಶರಣರು, "ನಮ್ಮ ಪೂರ್ವಜರು ಆಧ್ಯಾತ್ಮದೊಂದಿಗೆ ಆರೋಗ್ಯಯುತ ಜೀವನ ನಡೆಸುತ್ತಿದ್ದರು. ಅವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸಬೇಕು" ಎಂದು ಹೇಳಿದರು.
ಕೆ.ಎಲ್.ಇ. ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಹಣಮಂತ ಗುರುವ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ರಾಯಬಾಗ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅಶೋಕ ಅಂಗಡಿ, ಮಾಜಿ ಜಿಪಂ ಸದಸ್ಯ ಮಹಾದೇವ ಶಿರಗೂರೆ, ನಿವೃತ್ತ ಶಿಕ್ಷಕ ಮಹಾದೇವ ಮಠದ, ನಿಂಗಪ್ಪ ತೇರದಾಳೆ, ಶಿವಗೊಂಡ ಹಂಜೆ, ಯಮನಪ್ಪ ಮಂಟೂರೆ, ಕಲ್ಲಪ್ಪ ಕೊಕಟನೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 