ಯಲ್ಲಮ್ಮನ ಗುಡ್ಡಕ್ಕೆ ರೋಹಿಣಿ ಸಿಂಧೂರಿ ಭೇಟಿ
ಉಗರಗೋಳ 24: ಶ್ರೀಕ್ಷೇತ್ರ ಯಲ್ಲಮ್ಮನ ಗುಡ್ಡಕ್ಕೆ ಧಾರ್ಮಿಕ ಧತ್ತಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ ಶುಕ್ರವಾರ ಭೇಟಿ ನೀಡಿ, ಆಧಿಶಕ್ತಿ ರೇಣುಕಾ ಯಲ್ಲಮ್ಮ ದೇವಿಯ ದರ್ಶನ ಆಶಿರ್ವಾದ ಪಡೆದುಕೊಂಡರು.
ಶ್ರೀರೇಣುಕಾ ಯಲ್ಲಮ್ಮಾ ದೇವಸ್ಥಾನ ವತಿಯಿಂದ ಆಯುಕ್ತೆ ರೋಹಿಣಿ ಸಿಂಧೂರಿ ಅವರನ್ನು ಶಾಲೂ ಹೊದಿಸಿ ಸತ್ಕರಿಸಲಾಯಿತು.
ಬಳಿಕ ಶ್ರೀಕ್ಷೇತ್ರದ ಇತಿಹಾಸ ಕುರಿತು ಅರ್ಚಕರಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಇಂತಹ ಪುಣ್ಯ ಕ್ಷೇತ್ರಕ್ಕೆ ಬರುವ ಭಕ್ತರು ಭಯ, ಭಕ್ತಿ, ಶ್ರದ್ಧಾ ಭಕ್ತಿಯಿಂದ ಧಾರ್ಮಿಕ ವಿಧಿ ವಿಧಾನ ಕೈಗೊಳ್ಳಬೇಕು, ಸ್ವಚ್ಛತೆಗೆ ಆದ್ಯತೆ ನೀಡಿ ಶ್ರೀಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಬೇಕು. ಶ್ರೀಕ್ಷೇತ್ರದ ಸುತ್ತ ಮುತ್ತ ಎಲ್ಲೆಂದರಲ್ಲಿ ಪರಡಿಗಳನ್ನು ಎಸೆಯಲು ಅವಕಾಶ ನೀಡಬಾರದು ಭಕ್ತರು ಸಹಕರಿಸುವಂತೆ ಮನವಿ ಮಾಡಿಕೋಳ್ಳಬೇಕು. ಅದಕ್ಕೆ ಸೂಕ್ತ ಸ್ಥಳಾವಕಾಶ ನಿಗದಿಪಡಿಸಬೇಕು, ಸುತ್ತಲಿನ ಜಾಗದಲ್ಲಿ ಶುಚಿತ್ವ ಕಾಪಾಡಲು ಕ್ರಮ ಕೈಗೋಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪವಿತ್ರ ಎಣ್ಣೆಹೊಂಡಕ್ಕೆ ಭೇಟಿ ನೀಡಿ ಪರೀಶೀಲಿಸಿ ಆಯುಕ್ತರು ಇಲ್ಲಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಸ್ನಾನಕ್ಕಾಗಿ ಇನ್ನೂ ಹೆಚ್ಚಿನ ವ್ಯವಸ್ಥೆ ಮಾಡಲು ಸೂಚಿಸಿದ ಅವರು ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಬರುವಂತಹ ಭಕ್ತರಿಗೆ ಸುಲಭ ದರ್ಶನಕ್ಕೆ ವ್ಯವಸ್ಥೆ ಹಾಗೂ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲಾಗುವದೆಂದ ಅವರು ದೇವಸ್ಥಾನದ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುವದಾಗಿ ಭರವಸೆ ನೀಡಿದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ರವಿ ಕೋಟಾರಗಸ್ತಿ, ಸಮಿತಿ ಸದಸ್ಯರು, ಅರ್ಚಕರು ಹಾಗೂ ದೇವಸ್ಥಾನ ಸಿಬ್ಬಂದಿ, ಅಧಿಕಾರಿಗಳು ಇದ್ದರು.