ರೋವರ್ಸ್-ರೇಂಜರ್ಸ್ ದಿನ ಆಚರಣೆ
Rovers-Rangers Day Celebration
ತಾಳಿಕೋಟೆ, ಆ.7: ವೀರಶೈವ ವಿದ್ಯಾವರ್ಧಕ ಸಂಘದ ಶ್ರೀ ಖಾಸತೇಶ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ನ ರೋವರ್ಸ್ ಹಾಗೂ ರೇಂಜರ್ಸ್ ಘಟಕದ ವತಿಯಿಂದ ಗುರುವಾರ ರೋವರ್ಸ್-ರೇಂಜರ್ಸ್ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ರೇಂಜರ್ಸ್ ಅಧಿಕಾರಿ ಸುಜಾತ ಚಲವಾದಿ, ಸ್ಕೌಟ್ಸ್ ಮತ್ತು ಗೈಡ್ಸ್ ಸೇವೆ, ನಾಯಕತ್ವ, ಶಿಸ್ತು ಹಾಗೂ ಸಹೋದರತ್ವದ ಮೌಲ್ಯಗಳನ್ನು ಬೆಳೆಸುವ ಸಂಘಟನೆಯಾಗಿದ್ದು, ಪ್ರತಿಯೊಬ್ಬ ವಿದ್ಯಾರ್ಥಿಯೂ ಸಮಾಜಸೇವೆ ಮತ್ತು ರಾಷ್ಟ್ರಸೇವೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ರೋವರ್ಸ್ ಅಧಿಕಾರಿ ಅಶೋಕ್ ರಾಠೋಡ್ ಮಾತನಾಡಿ, ಪರಿಸರ ಸಂರಕ್ಷಣೆ, ಸಮಾಜಸೇವೆ, ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಸೇವಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಿ.ಬಿ. ಮೂಗಡ್ಲಿಮಠ ಮಾತನಾಡಿ ರೋವರ್ಸ್-ರೇಂಜರ್ಸ್ ದಿನವು ಸೇವೆ, ಸ್ನೇಹ ಹಾಗೂ ಬದ್ಧತೆಯ ಸಂಕೇತವಾಗಿದ್ದು, ವಿದ್ಯಾರ್ಥಿಗಳಲ್ಲಿ ಉತ್ತಮ ನಾಯಕತ್ವ ಗುಣಗಳನ್ನು ಬೆಳೆಸುವ ವೇದಿಕೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಪ್ರಥಮ ವರ್ಷದ ರೋವರ್ಸ್ ಹಾಗೂ ರೇಂಜರ್ಸ್ ವಿದ್ಯಾರ್ಥಿಗಳಿಗೆ ಸ್ಕಾರ್ಫ್ ಧರಿಸಿ ಪ್ರತಿಜ್ಞಾವಿಧಿ ಬೋಧಿಸುವ ಮೂಲಕ ಘಟಕಕ್ಕೆ ಸೇರೆ್ಡ ಮಾಡಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 