ಬೆಂಗಳೂರು ಕಾಲ್ತುಳಿತ ಘಟನೆ ಯಲ್ಲಿ ಮೃತರ ಕುಟುಂಬಕ್ಕೆ ರೂ.25 ಲಕ್ಷ ಪರಿಹಾರ ವಿತರಣೆ
Rs. 25 lakh compensation distributed to the family of the deceased in the Bengaluru stampede inciden
ಕಾರವಾರ, ಜೂ.9 :- ಇತ್ತೀಚೆಗೆ ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ ಒಳಗಾಗಿ ಮೃತಪಟ್ಟ ಸಿದ್ಧಾಪುರದ ಗೃಹಿಣಿ ಅಕ್ಷತಾ ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದ ವತಿಯಿಂದ ರೂ. 25 ಲಕ್ಷ ಪರಿಹಾರದ ಚೆಕ್ ನ್ನು ಶಿರಸಿ-ಸಿದ್ದಾಪುರ ಶಾಸಕ ಭೀಮಣ್ಣ ನಾಯ್ಕ ಸೋಮವಾರ ಮೃತರ ಮನೆಗೆ ತೆರಳಿ ವಿತರಿಸಿದರು.
ನಂತರ ಮಾತನಾಡಿದ ಅವರು ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತಕ್ಕೆ ಒಳಗಾದ ಕುಟುಂಬಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿದ 25 ಲಕ್ಷ ಪರಿಹಾರವನ್ನು ಮೃತ ಕುಟುಂಬದ ಮನೆ ಬಾಗಿಲಿಗೆ ತೆರಳಿ ಕುಟುಂಬಸ್ಥರಗೆ ಚೆಕ್ ವಿತರಿಸಲಾಗಿದೆ ಎಂದರು.
ಈ ಪರಿಹಾರದ ಹಣದಿಂದ ಮೃತರ ಕುಟುಂಬಸ್ಥರ ದುಃಖವನ್ನು ಭರಿಸಲು ಸಾಧ್ಯವಿಲ್ಲ. ಈ ಘಟನೆ ನಡೆಯಬಾರದಿತ್ತು ಆದರೆ ನಡೆದಿದೆ. ಈ ನೋವುನ್ನು ಭರಿಸುವ ಶಕ್ತಿಯನ್ನು ಹಾಗೂ ಕುಟುಂಬಕ್ಕೆ ಆತ್ಮಸ್ಥೆರ್ಯ ತುಂಬಿ ಜನ ಸಾಮಾನ್ಯರ ಜೊತೆ ಬೆರೆಯುವಂತ ಶಕ್ತಿ ಆ ಪರಮಾತ್ಮ ನೀಡಲಿ ಎಂದರು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಕುಟುಂಬಸ್ಥರಿಗೆ ಯಾವುದೇ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾಡಳಿತದ ಮೂಲಕ ಒದಗಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಸಿದ್ದಾಪುರ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಉಪವಿಭಾಗಾಧಿಕಾರಿ ಕಾವ್ಯಾರಾಣಿ ಕೆ.ವಿ., ತಹಸೀಲ್ದಾರ್ ಎಂ.ಆರ್.ಕುಲಕರ್ಣಿ ಮತ್ತಿತರರು ಉಪಸ್ಥಿತರಿದ್ದರು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 