ಮಲಪ್ರಭಾ ಎಡದಂಡೆ ಕಾಲುವೆ ಸೈಫನ್ ದುರಸ್ತಿಗೆ 19 ಕೋಟಿ ರೂ. ಅನುಮೋದನೆ: ಶಾಸಕ ವಿಶ್ವಾಸ ವೈದ್ಯ ಭರವಸೆ
Rs 19 crore approved for Malaprabha left bank canal siphon repair: MLA Vishwas Vaidya assures
ಸವದತ್ತಿ 31 : ತಾಲೂಕಿನ ಮುನವಳ್ಳಿ ಸಮೀಪದ ಶಿಂದೋಗಿ ಕ್ರಾಸ್ನಲ್ಲಿ ಮಲಪ್ರಭಾ ಎಡದಂಡೆ ಕಾಲುವೆಯ ಸೈಫನ್ ದುರಸ್ತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ರೈತರ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವಿಶ್ವಾಸ ವೈದ್ಯ ಅವರು, 19 ಕೋಟಿ ರೂಪಾಯಿ ಅನುದಾನಕ್ಕೆ ಸರ್ಕಾರದಿಂದ ಅಧಿಕೃತ ಅನುಮೋದನೆ ದೊರೆತಿದೆ ಎಂದು ಹೇಳಿದರು. ಮಲಪ್ರಭಾ ಜಲಾಶಯದ ಎಡದಂಡೆ ಕಾಲುವೆಯ ಸೈಫನ್ ದುರಸ್ತಿಯಲ್ಲಿನ ವಿಳಂಬದಿಂದಾಗಿ ಶಿಂದೋಗಿ, ಮುನವಳ್ಳಿ, ಯಕೇರಿ, ಹಿರೂರ, ಹಳ್ಳೂರ ಭಂಡಾರಹಳ್ಳಿ, ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳ ರೈತರು ತಮ್ಮ ಜಮೀನುಗಳಿಗೆ ನೀರು ಸಿಗದೆ ಪರದಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ರೈತರು ಹಮ್ಮಿಕೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡ ಅವರು ಹೋರಾಟಗಾರರೊಂದಿಗೆ ಸುದೀರ್ಘವಾಗಿ ಚರ್ಚಿಸಿ ಸಮಸ್ಯೆಗಳನ್ನು ಆಲಿಸಿದರು.
ಬಳಿಕ ಶಾಸಕ ವಿಶ್ವಾಸ ವೈದ್ಯ ಮಾತನಾಡಿ, ಸೈಫನ್ ದುರಸ್ತಿಗೆ 19 ಕೋಟಿ ರೂಪಾಯಿಗಳ ಪ್ರಸ್ತಾವನೆಗೆ ಸರ್ಕಾರದಿಂದ ಅಧಿಕೃತ ಅನುಮೋದನೆ ದೊರೆತಿದೆ. ಈ ಕಾಮಗಾರಿ ಪೂರ್ಣಗೊಳ್ಳಲು ಕನಿಷ್ಠ 5 ತಿಂಗಳ ಕಾಲಾವಕಾಶ ಅಗತ್ಯವಿದ್ದರೂ, ಆದಷ್ಟು ಶೀಘ್ರವಾಗಿ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಭರವಸೆ ನೀಡಿದರು. ಸವದತ್ತಿ ಹಾಗೂ ಯರಗಟ್ಟಿ ತಾಲೂಕಿನ ಸಮಗ್ರ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಮತ್ತು ನಮ್ಮ ಅನ್ನದಾತರಿಗೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆಯಾಗಿದೆ. ರೈತರ ಹಿತದೃಷ್ಟಿಯಿಂದ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ಗುಣಮಟ್ಟದಿಂದ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು. ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಬಿ.ಎನ್.ಪ್ರಭುನವರ, ಮಂಜುನಾಥ ಪಾಚಂಗಿ, ಹಿರಿಯ ಮುಖಂಡರ ಪಂಚನಗೌಡ ದ್ಯಾಮನಗೌಡ, ಮಾರುತಿ ಬಸಲಿಗುಂದಿ, ಪುಂಡಲೀಕ ಮೇಟಿ, ಸಿ.ಬಿ.ಬಾಳಿ, ಶಿವಕುಮಾರ್ ರಾಠೋಡ್, ಹನಮಂತ ಸಿಂಗನ್ನವರ, ಸ್ಥಳೀಯ ರೈತ ಮುಖಂಡರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 