ಮೃತ ಹೊಂದಿದ ರೈತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಮೃತ ಹೊಂದಿದ ರೈತ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ
ಹಾನಗಲ್ 14: ಮರ ಬಿದ್ದು ಮರಣ ಹೊಂದಿದ ನಗರದ ರೈತ ಫಕ್ಕೀರ್ಪ ಪಾಂಡಪ್ಪ ಕೊಪ್ಪರಸಿಕೊಪ್ಪ ಅವರ ಕುಟುಂಬಕ್ಕೆ ಸರ್ಕಾರದಿಂದ ಮಂಜೂರಿಯಾದ 5 ಲಕ್ಷ ರೂ. ಪರಿಹಾರವನ್ನು ಅವರ ಕುಟುಂಬಕ್ಕೆ ಶಾಸಕ ಶ್ರೀನಿವಾಸ ಮಾನೆ ವಿತರಿಸಿದರು.
ಮೃತ ರೈತ ಫಕ್ಕೀರ್ಪ ಕೊಪ್ಪರಸಿಕೊಪ್ಪ ಅವರ ಪತ್ನಿ ಪಾರ್ವತೆವ್ವ ಕೊಪ್ಪರಸಿಕೊಪ್ಪ ಅವರಿಗೆ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಪರಿಹಾರ ವಿತರಿಸಿದರು. ಪ್ರಕೃತಿ ವಿಕೋಪ ಪರಿಹಾರದಡಿ ಯಾವುದೇ ಪ್ರಕರಣಗಳನ್ನು ಬಾಕಿ ಉಳಿಸಿಕೊಳ್ಳದೇ ಪರಿಹಾರ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ. ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳ ಮತ್ತು ರೈತ ಸಮುದಾಯದ ನೆರವಿಗೆ ಧಾವಿಸಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಈ ಸಂದರ್ಭದಲ್ಲಿ ಶಾಸಕ ಮಾನೆ ಹೇಳಿದರು.
ತಹಶೀಲ್ದಾರ್ ರೇಣುಕಾ ಎಸ್., ಪುರಸಭೆ ಮಾಜಿ ಅಧ್ಯಕ್ಷರಾದ ಯಲ್ಲಪ್ಪ ಕಿತ್ತೂರ, ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ತಾಪಂ ಮಾಜಿ ಅಧ್ಯಕ್ಷ ಸಿದ್ದನಗೌಡ ಪಾಟೀಲ ಸೇರಿದಂತೆ ಇನ್ನಿತರರು.