ಬ್ಯಾಡ್ಗಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ: ಉಳ್ಳಾಗಡ್ಡಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯ ಶ್ಲಾಘನೀಯ: ಉಳ್ಳಾಗಡ್ಡಿ

ಬ್ಯಾಡಗಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ತಾಲೂಕಿನಲ್ಲಿ ನಿರಂತರವಾಗಿ ಮಹಿಳೆಯರ ಆರ್ಥಿಕ ಸದೃಢತೆಯ ಜೊತೆಗೆ ಜನಪರ ಕಾರ್ಯ ಕೈಗೊಳ್ಳುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪುರಸಭೆಯ ಸದಸ್ಯೆ ಸರೋಜಾ ಉಳ್ಳಾಗಡ್ಡಿ ಹೇಳಿದರು.

ಪಟ್ಟಣದ ಕುಂಬಾರ ಓಣಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿಯಲ್ಲಿ ನೂತನವಾಗಿ ರಚನೆಗೊಂಡ ಶ್ರೀಗಂಧ ಸ್ವಸಹಾಯ ಸಂಘವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

 ಪ್ರಸ್ತುತ ದಿನಗಳಲ್ಲಿ ಹೊಸ ವರ್ಷದ ಸಂಭ್ರಮವನ್ನು ವಿವಿಧ ರೀತಿಯಲ್ಲಿ ಆಚರಿಸುತ್ತಾರೆ. ಆದರೆ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಹೊಸ ಸಂಘವನ್ನು ರಚನೆ ಮಾಡಿ ಪ್ರಗತಿಯ ಹಾದಿಯಲ್ಲಿ ಹೊಸ ವರ್ಷವನ್ನು  ಬರಮಾಡಿಕೊಳ್ಳಲು ಮುಂದಾಗಿದೆ. ಮಹಿಳೆಯರೂ ಸಹ ತಮ್ಮ ಭವಿಷ್ಯತ್ತಿನಲ್ಲಿ ಸರ್ವತೋಮುಖ ಅಭಿವೃದ್ಧಿಗಾಗಿ ಸಂಘಗಳನ್ನು ರಚನೆ ಮಾಡಿಕೊಂಡಿರುವುದು ಸಂತಸದ ವಿಷಯವಾಗಿದೆ ಎಂದರು.

ತಾಲೂಕಿನ ಯೋಜನಾಧಿಕಾರಿ ರಘುಪತಿ ಮಾತನಾಡಿ, ಪೂಜ್ಯ ಡಾ.ವೀರೇಂದ್ರ ಹೆಗಡೆಯವರ ಆಶಯದಂತೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿಯಲ್ಲಿ ಜನೇವರಿ ಒಂದರ ಹಿಂದಿನ ದಿನವಾದ ಡಿಸೆಂಬರ್ 3ನೇ ದಿನದಂದು ಹೊಸ ಸಂಘದ ರಚನೆಯ ಮೂಲಕ ಅಭಿವೃದ್ಧಿಯ ಮುನ್ನುಡಿಗೆ ಹೊಸವರ್ಷದ ಸಂಭ್ರಮದ ಹೊಸತನ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಮೇಲ್ವಿಚಾರಕರಾದ ಶಕುಂತಲಾ, ಶೀತಲ್ ಬೇಕಲ್, ಸೇವಾ ಪ್ರತಿನಿಧಿ ಸುಧಾ, ಒಕ್ಕೂಟದ ಅಧ್ಯಕ್ಷೆ ರೇಷ್ಮಾ, ಸುನೀತಾ ತಾಳಗುಂದಿ ಹಾಗೂ ನೂತನ ಸ್ವಸಹಾಯ ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು.

 

ಸುದ್ದಿ ಓದಿ