ಗ್ರಾಮೀಣ ಕ್ರೀಡೆಗಳಿಂದ ಉತ್ಸಾಹ, ಒಗ್ಗಟ್ಟು ಮತ್ತು ಕ್ರೀಡಾಸ್ಫೂರ್ತಿ ವೃದ್ಧಿ
ಲೋಕದರ್ಶನ ವರದಿ
ಯರಗಟ್ಟಿ 10: ಗ್ರಾಮೀಣ ಭಾಗದ ಸಾಂಪ್ರದಾಯಿಕ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ರೈತರ ಬದುಕಿನ ಅವಿಭಾಜ್ಯ ಅಂಗವಾಗಿವೆ. ಇಂತಹ ಕ್ರೀಡೆಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಕ್ರೀಡಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ಸಮೀಪದ ಮುಗಳಿಹಾಳ ಗ್ರಾಮದಲ್ಲಿ ಶನಿವಾರ ವಿಶ್ವಾಸಣ್ಣಾ ವೈದ್ಯ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಶಾಸಕ ವೈದ್ಯ ಅವರ 45ನೇ ಹುಟ್ಟುಹಬ್ಬದ ನಿಮಿತ್ಯ ತೆರೆಬಂಡಿ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ತೆರೆಬಂಡಿ ಸ್ಪರ್ಧೆಗಳು ಗ್ರಾಮೀಣ ಜನರಲ್ಲಿ ಉತ್ಸಾಹ, ಒಗ್ಗಟ್ಟು ಹಾಗೂ ಕ್ರೀಡಾಸ್ಫೂರ್ತಿಯನ್ನು ಬೆಳೆಸುತ್ತವೆ. ರೈತರು ಮತ್ತು ಗ್ರಾಮೀಣ ಜನರೊಂದಿಗೆ ನಿಕಟ ಸಂಬಂಧ ಹೊಂದಿರುವ ಇಂತಹ ಸಾಂಪ್ರದಾಯಿಕ ಕ್ರೀಡೆಗಳಿಗೆ ಪ್ರೋತ್ಸಾಹ ನೀಡುವುದು ಅಗತ್ಯ. ಯುವಕರು ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಬೇಮೂಲ್ ನಿರ್ದೇಶಕ ಶಂಕರ ಇಟ್ನಾಳ, ಪ್ರಕಾಶ ವಾಲಿ, ಎಪಿಎಂಸಿ ಅಧ್ಯಕ್ಷ ನೀಲಕಂಠ ಶಿದಬಸನ್ನವರ, ರಾಮಣ್ಣ ದಳವಾಯಿ, ಬಸಪ್ಪ ದಳವಾಯಿ, ಮಂಜುನಾಥ ಶಿವಾಪುರ, ಬಾಲಪ್ಪ ಮಾಯನ್ನಿ, ಸಿ ಬಿ ಬಾಳಿ, ಸವದತ್ತಿ ಎಪಿಎಂಸಿ ಅಧ್ಯಕ್ಷ ಚಂದ್ರು ಜಂಬ್ರಿ, ಪ್ರಜ್ವಲ್ ಗೌಡರ, ಹಣಮಂತ ಪೂಜೇರಿ, ವಿಠ್ಠಲ ತೋರಣಗಟ್ಟಿ, ಗ್ಯಾರಂಟಿ ಯೋಜನೆಯ ಅಧ್ಯಕ್ಷ ಗೋಪಾಲ ದಳವಾಯಿ, ರವಿ ಹರಳಿ, ವಿಠ್ಠಲ ದಳವಾಯಿ, ಪಂಚಾಕ್ಷರಿ ಪಟ್ಟಣಶೆಟ್ಟಿ, ಬಸು ಹಸಬಿ, ಸಂಜು ದಳವಾಯಿ, ಲಕ್ಷ್ಮಣ ದಳವಾಯಿ , ಸೇರಿದಂತೆ ಗ್ರಾಮದ ಗಣ್ಯರು, ಅಭಿಮಾನಿ ಬಳಗದ ಪದಾಧಿಕಾರಿಗಳು, ಯುವಕರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.