ಗ್ರಾಮೀಣ ಪ್ರತಿಭೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಯರಗಟ್ಟಿ 07: ದಕ್ಷಿನ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ 2023-24 ನೇ ಸಾಲಿನ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ಸಮೀಪದ ಮುಗಳಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆ 9 ನೇ ತರಗತಿಯ ವಿದ್ಯಾರ್ಥಿನಿ ಶೋಭಾ ವಿಠ್ಠಲ ಪುಂಜಿ ಇವಳು ಇದೇ ಡಿಸೆಂಬರ್ ತಿಂಗಳ ಕೊನೆಯ ವಾರದಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಥ್ಲೆಟಿಕ್ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿ, ಶಾಲೆಗೂ ಮುಗಳಿಹಾಳ ಗ್ರಾಮಕ್ಕೂ ಕೀರ್ತಿ ತಂದುದ್ದಕ್ಕಾಗಿ ವಿದ್ಯಾರ್ಥಿಯ ಈ ಸಾಧನೆಗೆ ಹಾಗೂ ತರಬೇತಿ ನೀಡಿದ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ನಾಗರಾಜ ಭಜಂತ್ರಿಯವರಿಗೆ, ಶಾಲೆಯ ಮುಖ್ಯೋಪಾದ್ಯಾಯರು ಮತ್ತು ಸರ್ವ ಸಿಬ್ಬಂದಿಯವರು, ಮುಗಳಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವ ಸದಸ್ಯರು, ಶಾಲೆಯ ಹಳೆಯ ವಿದ್ಯಾರ್ಥಿಗಳು ಗ್ರಾಮದ ಯುವಕರು, ಹಿರಿಯರು ಅಭಿನಂದನೆಗಳನ್ನು ಸಲ್ಲಿಸಿ, ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆಗೈಯುವಂತೆ ಹಾರೈಸಿದ್ದಾರೆ.