ರಷ್ಯಾ ಸ್ಕೂಲ್ ನಲ್ಲಿ ಗುಂಡಿನ ದಾಳಿ; ಐವರು ಮಕ್ಕಳು ಸೇರಿದಂತೆ 9 ಮಂದಿ ಸಾವು!
ಮಾಸ್ಕೋ: ಸೆಪ್ಟೆಂಬರ್ 26:ಮಧ್ಯ ರಷ್ಯಾದ ಇಝೆವ್ಸ್ಕ್ ನಗರದ ಶಾಲೆಯೊಂದರಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಐದು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ತನಿಖಾಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.
“ಈ ಅಪರಾಧದಿಂದಾಗಿ ಶಿಕ್ಷಣ ಸಂಸ್ಥೆಯ ಇಬ್ಬರು ಭದ್ರತಾ ಸಿಬ್ಬಂದಿ ಮತ್ತು ಇಬ್ಬರು ಶಿಕ್ಷಕರು ಮತ್ತು ಐದು ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ” ಎಂದು ರಷ್ಯಾದ ತನಿಖಾ ಸಮಿತಿಯು ಟೆಲಿಗ್ರಾಮ್‌ನಲ್ಲಿ ಹೇಳಿಕೆಯಲ್ಲಿ ತಿಳಿಸಿದೆ. ದಾಳಿಕೋರನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಿದರು.