ಅಂತರರಾಷ್ಟ್ರೀಯ

ರಷ್ಯಾ-ಉಕ್ರೇನ್ ಬಿಕ್ಕಟ್ಟು: ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ನಾಲ್ವರ ಉಕ್ರೇನ್‌ ನೆರೆ ರಾಷ್ಟ್ರಕ್ಕೆ ಕಳುಹಿಸಲು ನಿರ್ಧಾರ

ರಷ್ಯಾ-ಉಕ್ರೇನ್ ಬಿಕ್ಕಟ್ಟು: ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ನಾಲ್ವರ ಉಕ್ರೇನ್‌ ನೆರೆ ರಾಷ್ಟ್ರಕ್ಕೆ ಕಳುಹಿಸಲು ನಿರ್ಧಾರ

ನವದೆಹಲಿ: ಫೆಬ್ರವರಿ 28: , ಉಕ್ರೇನ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿನ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸತತ ಎರಡನೇ ದಿನ ಉನ್ನತ ಮಟ್ಟದ ಸಭೆ ನಡೆಸಿ ಉಕ್ರೇನ್ ನಿಂದ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಕುರಿತು ಚರ್ಚೆ ನಡೆಸಿದರು.

ಕಾರ್ಯಸೂಚಿಯಲ್ಲಿ ಭಾರತೀಯ ಪ್ರಜೆಗಳ ಸ್ಥಳಾಂತರವನ್ನು ಆದ್ಯತೆಯಾಗಿಸಿಕೊಂಡಿರುವ ಪ್ರಧಾನ ಮಮತ್ರಿ ನರೇಂದ್ರ ಮೋದಿ, ಚರ್ಚೆಯ ನಂತರ, ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು ಮತ್ತು ಜನರಲ್ ವಿಕೆ ಸಿಂಗ್ ಅವರನ್ನು ಸ್ಥಳಾಂತರಿಸುವ ಕಾರ್ಯಾಚರಣೆಗಳನ್ನು ಸಂಘಟಿಸಲು ಉಕ್ರೇನ್‌ನ ನೆರೆಯ ರಾಷ್ಟ್ರಗಳಿಗೆ ಕಳುಹಿಸಲು ನಿರ್ಧರಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಭಾರತೀಯ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತ್ರಿಪಡಿಸುವುದು ಮತ್ತು ಅವರನ್ನು ಸ್ಥಳಾಂತರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಮೋದಿ ಪ್ರತಿಪಾದಿಸಿದ್ದು, ಭಾರತೀಯ ವಿದ್ಯಾರ್ಥಿಗಳ ಸ್ಥಳಾಂತರವನ್ನು ತ್ವರಿತಗೊಳಿಸಲು ಉಕ್ರೇನ್‌ನ ನೆರೆಯ ರಾಷ್ಟ್ರಗಳೊಂದಿಗೆ ಸಹಕಾರವನ್ನು ಇನ್ನಷ್ಟು ಹೆಚ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ವಿದೇಶಾಂಗ ಸಚಿವ ಎಸ್ ಜೈಶಂಕರ್, ವಿದೇಶಾಂಗ ಕಾರ್ಯದರ್ಶಿ ಹರ್ಷ್ ವಿ ಶೃಂಗ್ಲಾ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಸಭೆಯಲ್ಲಿ ಭಾಗವಹಿಸಿದ್ದರು.

ಸುದ್ದಿ ಓದಿ