ಅಮೆರಿಕಕ್ಕೆ ಅತ್ಯುತ್ತಮ ಗುಣಮಟ್ಟದ ಔಷಧಗಳ ಪೂರೈಕೆ ಮಾಡಿದ ರಷ್ಯಾ
ವಾಷಿಂಗ್ಟನ್, ಏ 3, ಅಮೆರಿಕದಲ್ಲಿ ಆತಂಕಕಾರಿಯಾಗಿ ವ್ಯಾಪಿಸುತ್ತಿರುವ ಕೊರೋನಾ ವೈರಸ್ ವಿರುದ್ಧ ಹೋರಾಡಲು ರಷ್ಯಾ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ಉಪಕರಣಗಳನ್ನು ಪೂರೈಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ತಿಳಿಸಿದ್ದಾರೆ. ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಅವರು, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ನೆರವನ್ನು ಪ್ರಸ್ತಾಪಿಸಲೇಬೇಕು. ಅಲ್ಲಿಂದ ಔಷಧಗಳನ್ನು ಹೊತ್ತ ಬೃಹತ್ ವಿಮಾನವೊಂದು ಆಗಮಿಸಿದೆ. ಅದನ್ನು ನಾವು ಸ್ವೀಕರಿಸಿದ್ದೇವೆ. ಅದು ಸಾಕಷ್ಟು ಜೀವಗಳನ್ನು ಉಳಿಸಬಹುದು ಎಂದಿದ್ದಾರೆ.
ರಷ್ಯಾದ ಸೇನಾ ವಿಮಾನ ಎಎನ್ -124 ಗುರುವಾರ ನ್ಯೂಯಾರ್ಕ್ ತಲುಪಿದೆ. ಇದರಲ್ಲಿ ಕೆಲವು ವಸ್ತುಗಳನ್ನು ಅಮೆರಿಕ ರಷ್ಯಾದಿಂದ ಖರೀದಿಸಿತ್ತು. ಅವುಗಳನ್ನು ತಲುಪಿಸುವಾಗ ರಷ್ಯಾ ಹೆಚ್ಚುವರಿ ಔಷಧಗಳನ್ನು ಕೂಡ ಪೂರೈಸಿದೆ. ಈ ಕುರಿತು ರಷ್ಯಾದೊಂದಿಗೆ ದೂರವಾಣಿ ಮಾತುಕತೆ ನಡೆದಿದೆ ಎಂದು ಟ್ರಂಪ್ ಹೇಳಿದ್ದಾರೆ. ಆದರೆ, ಇದರ ಹಿಂದಿರುವ ರಷ್ಯಾದ ಉದ್ದೇಶದ ಕುರಿತು ತಾವು ಸ್ವಲ್ಪವೂ ತಲೆಕೆಡಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ಗುರುವಾರ ಸಂಜೆಯವರೆಗೆ ಅಮೆರಿಕದಲ್ಲಿ 2.42 ಲಕ್ಷ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, 5,800 ಜನರು ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 9 ಸಾವಿರ ಮಂದಿ ಗುಣಮುಖರಾಗಿದ್ದಾರೆ.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 