ರಾಷ್ಟ್ರಮಟ್ಟದ ಶೂಟಿಂಗ್ ಸ್ಪರ್ಧೆಗೆ ಸ್ಥಾನ ಪಡೆದ ಗುರುದೇವ್ ಕಾಲೇಜಿನ ವಿದ್ಯಾರ್ಥಿ ರಿಯಾನ್ ಅಹಮದ್
ಗದಗ 14 : ತುಮಕೂರಿನಲ್ಲಿ ಇಂದು ನಡೆದ ರಾಜ್ಯಮಟ್ಟದ ಶೂಟಿಂಗ್ ಸ್ಪರ್ಧೆಯಲ್ಲಿ ಧಾರವಾಡದ ಗುರುದೇವ್ನ ಜೆ.ಜಿ. ಪದವಿಪೂರ್ವ ವಿಜ್ಞಾನ ಕಾಲೇಜು, ಪಾಪನಾಶಿ, ಗದಗದ ವಿದ್ಯಾರ್ಥಿ ರಿಯಾನ್ ಅಹಮದ್ ಪ್ರಥಮ ಸ್ಥಾನ ಪಡೆದು ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾನೆ.
ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸ್ಪರ್ಧಿಗಳ ನಡುವೆ ಅತ್ಯುತ್ತಮ ಪ್ರದರ್ಶನ ನೀಡಿದ ರಿಯಾನ್ ಅಹಮದ್ ಪ್ರಥಮ ಸ್ಥಾನ ಗಳಿಸುವ ಮೂಲಕ ತನ್ನ ಪ್ರತಿಭೆ, ಏಕಾಗ್ರತೆ ಮತ್ತು ಕ್ರೀಡಾ ಕೌಶಲ್ಯವನ್ನು ಮೆರೆದಿದ್ದಾನೆ ಮತ್ತು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಹಾಗೂ ಗದಗ ಸ್ಪೋರ್ಟ್ಸ ಶೂಟಿಂಗ್ ಅಕಾಡೆಮಿಯ ತರಬೇತುದಾರ ಬಸವರಾಜ ಹೊಂಬಾಳಿ ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ. ವಿದ್ಯಾರ್ಥಿಯ ಸಾಧನೆಯು ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗಿದ್ದು, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸಾಧನೆಗಳನ್ನು ಮಾಡಲಿ ಎಂದು ಸಂಸ್ಥೆಯ ಆಡಳಿತ ಮಂಡಳಿ ಶುಭ ಹಾರೈಸಿದೆ