ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ಪಲ್ಲವಿ ನಾಡಗೌಡ
ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ: ಪಲ್ಲವಿ ನಾಡಗೌಡ
ತಾಳಿಕೋಟಿ 12: ಕ್ರೀಡೆ ಕೇವಲ ಸೋಲು-ಗೆಲುವಿನ ಸ್ಪರ್ಧೆಯಲ್ಲ; ಅದು ಶಿಸ್ತು, ಆತ್ಮವಿಶ್ವಾಸ, ಸಹನೆ ಹಾಗೂ ಕ್ರೀಡಾ ಸ್ಫೂರ್ತಿಯನ್ನು ಬೆಳೆಸುವ ಶಕ್ತಿಯುತ ಮಾಧ್ಯಮವಾಗಿದೆ. ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಎರಡನ್ನೂ ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಕ್ರೀಡೆಯಿಂದ ಕಲಿತು ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ದೇವಿಕಾ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ ಹೇಳಿದರು.
ಕರ್ನಾಟಕ ಸರ್ಕಾರ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಜಯಪುರ ಇವರ ಸಹಯೋಗದಲ್ಲಿ 2026-27ನೇ ಸಾಲಿನ ತಾಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ತಾಳಿಕೋಟಿಯ ಎಸ್.ಕೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದು, ಕ್ರೀಡಾ ಧ್ವಜಾರೋಹಣ ನೆರವೇರಿಸುವ ಮೂಲಕ ಪಲ್ಲವಿ ನಾಡಗೌಡ ಅವರು ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಗ್ರಾಮೀಣ ಪ್ರತಿಭೆಗಳಿಗೆ ಉತ್ತಮ ವೇದಿಕೆ
ಕ್ಷೇತ್ರ ಸಮನ್ವಯಾಧಿಕಾರಿ ಆರಿ್ಬ. ದಮ್ಮುರಮಠ ಮಾತನಾಡಿ, ದಸರಾ ಕ್ರೀಡಾಕೂಟ ರಾಜ್ಯದ ಹೆಮ್ಮೆಯ ಕ್ರೀಡಾಕೂಟವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರ ಸಾಮರ್ಥ್ಯವನ್ನು ರಾಜ್ಯ ಮಟ್ಟದವರೆಗೆ ಕೊಂಡೊಯ್ಯಲು ಉತ್ತಮ ವೇದಿಕೆಯಾಗಿದೆ. ಯಾವುದೇ ವಯೋಮಿತಿಯ ಭೇದವಿಲ್ಲದೆ ಆಸಕ್ತರು ಭಾಗವಹಿಸಿ ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಕ್ರೀಡೆಯ ಮೂಲಕ ಆರೋಗ್ಯಕರ ಹಾಗೂ ಶಿಸ್ತುಬದ್ಧ ಜೀವನ ರೂಪಿಸಿಕೊಳ್ಳಬೇಕು ಎಂದು ಹೇಳಿದರು. ಎಸ್.ಕೆ. ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಕಿಶೋರಕುಮಾರ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಸಂಗಮೇಶ ದೇಸಾಯಿ, ಕಾಂಗ್ರೆಸ್ ಯುವ ಮುಖಂಡ ಸಂಗನಗೌಡ ಅಸ್ಕಿ, ಎನ್ಜಿಒ ತಾಲೂಕು ಅಧ್ಯಕ್ಷ ಶಿವರಾಜ ಚೌದ್ರಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಿ.ಟಿ. ವಜ್ಜಲ್, ಪ್ರಭಾರಿ ತಾಲೂಕು ದೈಹಿಕ ಶಿಕ್ಷಣ ಪರೀವೀಕ್ಷಕ ಎ.ಜೆ. ಧಖನಿ, ಸಿಆರ್ಿ ಸಂಗಮೇಶ ಪಾಲ್ಕಿ, ದೈಹಿಕ ಶಿಕ್ಷಕರ ತಾಲೂಕು ಅಧ್ಯಕ್ಷ ರಾವುತ ಪೂಜಾರಿ, ಅಂಬೇಡ್ಕರ್ ಸೇನೆ ಅಧ್ಯಕ್ಷ ಗೋಪಾಲ ಕಟ್ಟಿಮನಿ, ಉಪಪ್ರಾಚಾರ್ಯ ಬೂದಿಹಾಳ, ಸಿಆರ್ಿ ಬೋರಾಮಣಿ, ಹಣಮಗೌಡ ಪೀರಾಪುರ, ಮಹೇಶ ಚಲವಾದಿ ಸೇರಿದಂತೆ ಗಣ್ಯರು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.