ಚಿತ್ರಮಂದಿರಗಳಿಗೆ ಮಾತ್ರ ನಿರ್ಬಂಧವೇಕೆ : ಪವರ್ ಸ್ಟಾರ್ ಪುನೀತ್
ಬೆಂಗಳೂರು, ಫೆ 03 :ರಾಜ್ಯ ಸರ್ಕಾರವು ಚಿತ್ರಮಂದಿರಗಳಲ್ಲಿ ಕೇವಲ ಶೇ 50ರಷ್ಟು ಪ್ರೇಕ್ಷಕರ ಭರ್ತಿಗೆ ಅವಕಾಶ ನೀಡಿರುವುದನ್ನು ಸ್ಯಾಂಡಲ್ ವುಡ್ ಖಂಡಿಸಿದೆ. ಮತ್ತು ಸರ್ಕಾರ ಈ ಬಗ್ಗೆ ಪುನರ್ ಪರಿಶೀಲಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ. ಖಾಸಗಿ ಕಾರ್ಯಕ್ರಮಗಳು, ಪ್ರವಾಸಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಜನರ ಪಾಲ್ಗೊಳ್ಳುವಿಕೆಗೆ ಅವಕಾಶ ನೀಡಿರುವಾಗ ಚಿತ್ರ ಮಂದಿರ ಭರ್ತಿಗೆ ಮಾತ್ರ ಅವಕಾಶವಿಲ್ಲವೇಕೆ ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪ್ರಶ್ನಿಸಿದ್ದಾರೆ.
ಉಪವಾಸ ಸತ್ಯಾಗ್ರಹಕ್ಕೆ ವಾಟಾಳ್ ನಿರ್ಧಾರ ಚಿತ್ರಮಂದಿರಗಳಿಗೆ ಪ್ರೇಕ್ಷಕರ ಭರ್ತಿಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮುಖ್ಯಮಂತ್ರಿಯವರಿಗೆ ಸರಿಯಾದ ಮಾಹಿತಿ ನೀಡಿಲ್ಲವೆಂದು ಕಾಣುತ್ತದೆ ಎಂದು ವಾಟಾಳ್ ನಾಗರಾಜ್ ಹೇಳಿದ್ದು, ಚಿತ್ರಮಂದಿರಗಳ ಸಂಪೂರ್ಣ ಭರ್ತಿಗೆ ಅವಕಾಶ ನೀಡದಿದ್ದರೆ ಹೋರಾಟ ನಡೆಸಬೇಕಾಗುತ್ತದೆ. ಒಂಟಿಯಾಗಿಯೇ ಉಪವಾಸ ಕುಳಿತುಕೊಳ್ಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.